ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ.
ಪರೀಕ್ಷೆ ಮುಗಿದ ನಂತರ ಬಿಡುಗಡೆಯಾಗುವ 1:3 ಮೆರಿಟ್ ಲಿಸ್ಟ್‌ನಲ್ಲಿ ಅಭ್ಯರ್ಥಿಗಳು ಗಳಿಸಿದ ಗೌಪ್ಯ ಅಂಕಗಳ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡು ಕೋಟಿ ಕೋಟಿ ಹಣ ದೋಚುತ್ತಿದ್ದುದು ಬಯಲಾಗಿದೆ. ಇದನ್ನೂ ಓದಿ: KPSC: ನ್ಯಾಯಯುತವಾಗಿ ಪರೀಕ್ಷೆ ಬರೆದ 24 ಅಭ್ಯರ್ಥಿಗಳ ಲಿಸ್ಟ್ ಕೋರ್ಟ್‌ಗೆ ನೀಡಿದ ಇ.ಡಿ
ಐಎಎಸ್ ಅಧಿಕಾರಿ ಹಾಗೂ ಮಾಜಿ ಪರೀಕ್ಷಾ ನಿಯಂತ್ರಕ ಗ್ಯಾನೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಕೆಪಿಎಸ್‌ಸಿ ಸದಸ್ಯರು ಈ ಜಾಲದಲ್ಲಿದ್ದರು. ಮೆರಿಟ್ ಆಧಾರದಲ್ಲಿ ತಮ್ಮ ಸ್ವಂತ ಸಾಮರ್ಥ್ಯದಿಂದಲೇ ಕೆಲಸ ಗಿಟ್ಟಿಸಿಕೊಳ್ಳುವ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು, ‘ನಮ್ಮ ಪ್ರಭಾವದಿಂದಲೇ ನಿಮಗೆ ಕೆಲಸ ಸಿಗುತ್ತಿದೆ’ ಎಂದು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಲಂಚ ವಸೂಲಿ ಮಾಡುತ್ತಿದ್ದರು.
ಕಂಪ್ಯೂಟರ್, ಸಿ-3 ಹಾಗೂ ಕಾರ್ಯದರ್ಶಿಗಳ ಕಚೇರಿಯಲ್ಲಿದ್ದ ಅಧಿಕಾರಿಗಳು ಈ ಗೌಪ್ಯ ಮಾಹಿತಿಯನ್ನು ಕೆಪಿಎಸ್‌ಸಿ ಸದಸ್ಯರು ಮತ್ತು ಮಧ್ಯವರ್ತಿಗಳಿಗೆ ಸೋರಿಕೆ ಮಾಡುತ್ತಿದ್ದರು. ಸ್ವಂತ ಶ್ರಮದಿಂದ ಆಯ್ಕೆಯಾಗುವ ಅಭ್ಯರ್ಥಿಗಳಿಗೂ ಮೋಸ ಮಾಡಿ ಹಣ ಪೀಕುತ್ತಿದ್ದ ಅಧಿಕಾರಿಗಳ ಈ ಕಳ್ಳಾಟ ಈಗ ಇ.ಡಿ ತನಿಖೆಯಿಂದ ಸಂಪೂರ್ಣವಾಗಿ ಅನಾವರಣಗೊಂಡಿದೆ. ಇದನ್ನೂ ಓದಿ: ಕೆಪಿಎಸ್‌ಸಿ ಅಕ್ರಮದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು

