ಬೆಂಗಳೂರು: ಕೆಪಿಎಸ್ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಚುರುಕುಗೊಂಡಿದೆ. ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಇ.ಡಿ ಅಧಿಕಾರಿಗಳು ಐಎಎಸ್ ಅಧಿಕಾರಿ ಗ್ಯಾನೇಂದ್ರ (Gyanendra) ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು (Basavaraj Kannale) ಬಂಧಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣೆ ನಡೆಸಿದ ಬಳಿಕ, ತನಿಖೆಗೆ ಸರಿಯಾಗಿ ಸಹಕರಿಸದ ಕಾರಣ ಇಬ್ಬರನ್ನೂ ಇಡಿ (ED) ಬಂಧಿಸಿದೆ. ಇಬ್ಬರನ್ನೂ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ. ಈ ಮೂಲಕ ಹಗರಣದಲ್ಲಿ ಮತ್ತಷ್ಟು ಜನರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ. ಇದನ್ನೂ ಓದಿ: ರಂಭಾಪುರಿ ಮಠಕ್ಕೆ ಸಿಎಂ ಭೇಟಿ; ಮಂಗಳಾರತಿಗೆ ಕಾಣಿಕೆ ಹಾಕುವಾಗ ಕೆಳಗೆ ಬಿದ್ದ 500 ರೂ. ನೋಟುಗಳು
ಈ ಹಿಂದೆ, ಪಶುವೈದ್ಯಾಧಿಕಾರಿಗಳ ಹಗರಣದಲ್ಲಿ ದಾಳಿ ನಡೆಸಿದ್ದ ಇಡಿ, ಗ್ಯಾನೇಂದ್ರ ಮನೆಯಲ್ಲಿ ದಾಖಲೆ ವಶಕ್ಕೆ ಪಡೆದಿತ್ತು. ದಾಖಲೆಗಳ ಆಧಾರದ ಮೇಲೆ ವಿಚಾರಣೆ ನಡೆಸಿದ್ದ ಇಡಿಗೆ ಇಬ್ಬರೂ ಕೂಡ ಸೂಕ್ತ ಉತ್ತರ ನೀಡಿರಲಿಲ್ಲ. ಇದೀಗ ಇಬ್ಬರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ.
ಇನ್ನೂ, ಗ್ಯಾನೇಂದ್ರ ಹಾಗೂ ಕನ್ನಾಳೆ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಸೆ.21ಕ್ಕೆ ಆದೇಶ ಕಾಯ್ದಿರಿಸಿದೆ.ಇದನ್ನೂ ಓದಿ: ವೆಟ್ಟುವಮ್ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

