ಬೆಳಗಾವಿ: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ (AE), ಕಿರಿಯ ಎಂಜನಿಯರ್ ಹಾಗೂ ಕಿರಿಯ ಸಹಾಯಕ ಎಂಜಿನಿಯರ್ (JE) ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲೇ ಪ್ರಕಟಿಸಲಾಗುವುದು. ಜೊತೆಗೆ ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಸಚಿವ ವಿ. ಸುನೀಲ್‌ಕುಮಾರ್ (V Sunil Kumar) ಅವರು ತಿಳಿಸಿದರು.
ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ (SureshKumar) ಅವರ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ
Advertisement
Advertisement
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದೆ. ಆದರೆ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
Advertisement
Advertisement
ಶಾಸಕ ಸುರೇಶಕುಮಾರ್ ಅವರು, ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಕೂಡಲೇ ಕ್ರಮವಹಿಸುವಂತೆ ಸಚಿವರಲ್ಲಿ ಕೋರಿದ್ದರು. ಇದನ್ನೂ ಓದಿ: ಆ ಒಂದು ಮಾತಿನಿಂದ ಮುರಿದು ಬಿತ್ತು ರೂಪೇಶ್ ಶೆಟ್ಟಿ- ರಾಜಣ್ಣ ಫ್ರೆಂಡ್‌ಶಿಪ್