ಬೆಳಗಾವಿ: ಗೋಕಾಕ್‌ನಲ್ಲಿ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸೆಗಲು KPTCL ಪರೀಕ್ಷೆಯಲ್ಲಿ ಅಕ್ರಮ – N95 ಡಿವೈಸ್ ಸೇರಿ ಇತರ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಬೆಂಗಳೂರಿನ ದೇವಸಂದ್ರ ಮೂಲದ ಮೊಹಮ್ಮದ್ ಅಜೀಮುದ್ದಿನ್ (37) ಬಂಧಿತ ಆರೋಪಿ. ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್ – ಜೆಡಿಎಸ್ ನಾಯಕನ ನಗರ ಸಭೆ ಸದಸ್ಯತ್ವ ರದ್ದು
Advertisement
Advertisement
ಪರೀಕ್ಷಾ ಅಕ್ರಮ ನಡೆಸಲು ಬೇಕಾಗುವ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಗಳನ್ನು (Electronic Devices) ದೆಹಲಿ ಮತ್ತು ಹೈದರಾಬಾದಿನಿಂದ ತಂದು ಸಂಜು ಭಂಡಾರಿ ಹಾಗೂ ಬೆಳಗಾವಿ ಜಿಲ್ಲೆಯ ಬೇರೆ ಜನರಿಗೆ ಮಾರಾಟ ಮಾಡುತ್ತಿದ್ದ ವಿಚಾರ ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಉಗ್ರರ ತವರು ನೆಲ ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು
Advertisement
ಬಂಧಿತನಿಂದ ಎರಡು ಮೊಬೈಲ್ ಮತ್ತು ವಿವಿಧ ಬಗೆಯ 179 ಎಲೆಕ್ಟ್ರಾನಿಕ್ ಡಿವೈಸ್ ಗಳು, ಎಲೆಕ್ಟ್ರಾನಿಕ್ ಡಿವೈಸ್ ಅಳವಡಿಸಿದ 7 ಎನ್ 95 ಮಾಸ್ಕ್, 41 ಬನಿಯನ್, ವಿವಿಧ ಬಗೆಯ 445 ಎಲೆಕ್ಟ್ರಾನಿಕ್ ಇಯರ್ ಪಿನ್, ವಿವಿಧ ಬಗೆಯ 554 ಚಾರ್ಜಿಂಗ್ ಕೇಬಲ್ ಹಾಗೂ 6 ವಾಕಿಟಾಕಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಆ.7 ರಂದು ಗೋಕಾಕ್ ನಗರದಲ್ಲಿ ಹೆಸ್ಕಾಂ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ನಡೆದಿತ್ತು.