ಬೆಳಗಾವಿ: ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷಾ ಅಕ್ರಮ (KPTCL Recruitment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬೆಳಗಾವಿ (Belagavi) ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
Advertisement
ಕಳೆದ ತಿಂಗಳು ಆ.07ರಂದು ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ (Smart Watch) ಬಳಸಿ ಪರೀಕ್ಷೆ ಎದುರಿಸಿ, ಅಕ್ರಮದಲ್ಲಿ ಸಹಾಯ ಸೇರಿದಂತೆ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನು (Electronic Devices) ಮಾರಾಟ ಮಾಡಿದ ಪ್ರಕರಣ ಸಂಬಂಧ ಈಗಾಗಲೇ 17 ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ತನಿಖೆ ತೀವ್ರಗೊಳಿಸಿದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್
Advertisement
Advertisement
ಬಗೆದಷ್ಟು ಅಕ್ರಮದ ವಾಸನೆ:
ಇಂದು ಗೋಕಾಕ್ ತಾಲೂಕಿನ ಅರಭಾವಿ ಪಟ್ಟಣದ ಅಕ್ಷಯ್ ದುಂದಪ್ಪ ಭಂಡಾರಿ (33), ಬೀರಣಗಡ್ಡಿ ಗ್ರಾಮದ ಬಸವರಾಜ ರುದ್ರಪ್ಪ ದುಂದನಟಿ (34), ರಾಜಾಪೂರ ಗ್ರಾಮದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ (22) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಅಕ್ಷಯ್ ಮತ್ತು ಶ್ರೀಧರ್ ಇಬ್ಬರು ಆರೋಪಿಗಳು ಪರೀಕ್ಷಾರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟ ಆರೋಪವಿದೆ. ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್‍ನ್ನು ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಡಾರಿ ತಂದು ಕೊಟ್ಟಿದ್ದಾರೆ. ಬಂಧಿತರಿಂದ ಮೊಬೈಲ್ ಮತ್ತು 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್, 18 ಇಲೆಕ್ಟ್ರಾನಿಕ್ ಡಿವೈಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಬಸವರಾಜ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿದ ಆರೋಪವಿದ್ದು ಈತನಿಂದ ಒಂದು ಮೊಬೈಲ್, ಒಂದು ಮೋಟಾರ್ ಸೈಕಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತ ಮೂರು ಜನ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮಾಯಿಗೆ ಕಪ್ಪುಪಟ್ಟಿ ಪ್ರದರ್ಶನ