ಮೈಸೂರು: ಕೆ.ಆರ್. ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕೆ.ಆರ್.ಪೇಟೆಯ ತಹಶೀಲ್ದಾರ್ ರವರು ಅಪಹರಣಕ್ಕೊಳಗಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಮಹೇಶ್ ಚಂದ್ರ ನಿಗೂಢವಾಗಿ ಅಪಹರಣಗೊಂಡಿದ್ದಾರೆ. ಇಂದು ಮುಂಜಾನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಮಹೇಶ್ ಚಂದ್ರರವರ ಓಮ್ನಿ ಕಾರು ಹಾಗೂ ಶೂಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.
Advertisement
ಇಂದು ಬೆಳಗ್ಗೆ ವಾಹನವನ್ನು ಗಮನಿಸಿದ ಚಿಕ್ಕವಡ್ಡರಗುಡಿ ಗ್ರಾಮಸ್ಥರು ಪೊಲೀಸರಿಗೆ ವಿಷಯವನ್ನು ಮುಟ್ಟಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪರಿಶೀಲನೇ ವೇಳೆ ಓಮ್ನಿ ವಾಹನವು ಕೆ.ಆರ್.ಪೇಟೆಯ ತಹಶೀಲ್ದಾರರಾದ ಮಹೇಶ್ ಚಂದ್ರ ಎಂಬವರದ್ದು ಎಂದು ತಿಳಿದು ಬಂದಿದೆ. ಅಲ್ಲದೇ ಸ್ಥಳದಲ್ಲಿ ಸಿಕ್ಕ ಶೂ ಹಾಗೂ ಹರಿದ ಬಟ್ಟೆ ಚೂರಿನಿಂದಾಗಿ ಅವರನ್ನು ಯಾರಾದರೂ ಅಪಹರಿಸಬಹುದೆಂಬ ಅನುಮಾನಕ್ಕೆ ಕಾರಣವಾಗಿದೆ.
Advertisement
Advertisement
ತಹಶೀಲ್ದಾರ್ ನಾಪತ್ತೆ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಹೆಚ್ಚುವರಿ ಜಿಲ್ಲಾವರಿಷ್ಠಾಧಿಕಾರಿಯಾದ ಅರುಣಾಂಶಿ ಗಿರಿಯವರು, ಮಹೇಶ್ ಚಂದ್ರರವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಹಶೀಲ್ದಾರ್ ಆಗಿದ್ದು, ಕಳೆದ ವಾರವಷ್ಟೇ ಅಧಿಕಾರ ಸ್ವೀಕರಿಸಿದ್ದರು. ಮಹೇಶ್ ರವರು ಈ ಹಿಂದೆ ಕೆ.ಆರ್. ನಗರದಲ್ಲಿ ತಹಶೀಲ್ದಾರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹೀಗಾಗಿ ಅವರ ಕುಟುಂಬದವರು ಕೆ.ಆರ್. ನಗರದಲ್ಲೇ ವಾಸವಾಗಿದ್ದರು. ಎಂದಿನಂತೆ ಗುರುವಾರ ರಾತ್ರಿ 7.30 ಕ್ಕೆ ಕೆ.ಆರ್.ಪೇಟೆಯಲ್ಲಿ ಸಕಾಲ ಸಭೆ ಮುಗಿಸಿ ಹಿಂತಿರುಗುವಾಗ ನಿಗೂಢವಾಗಿ ನಾಪತ್ತೆಯಾಗಿದ್ದಾರೆಂದು ತಿಳಿಸಿದ್ದಾರೆ.
Advertisement
ಘಟನೆ ಕುರಿತು ಪ್ರತಿಕ್ರಿಯಿಸಿದ ದಕ್ಷಿಣ ವಲಯ ಐಜಿಪಿ ಸೌಮೇಂದ್ರ ಮುಖರ್ಜಿಯವರು, ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೆ ತಹಶೀಲ್ದಾರ್ ಮಹೇಶ್ ಚಂದ್ರ ನಾಪತ್ತೆಯಾಗಿರುವುದು ನಿಜ. ಈ ಹಿನ್ನೆಲೆಯಲ್ಲಿ ಏಳು ತಂಡಗಳಿಂದ ಪತ್ತೆ ಕಾರ್ಯ ನಡೆಯುತ್ತಿದ್ದು, ಮೈಸೂರು, ಮಂಡ್ಯಗಳಲ್ಲಿ ತಲಾ ಮೂರು ತಂಡಗಳು ಹಾಗೂ ಬೆಂಗಳೂರಿನಲ್ಲಿ ಒಂದು ತಂಡ ತನಿಖೆ ನಡೆಸುತ್ತಿದೆ. ಮಹೇಶ್ ಚಂದ್ರರವರ ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದು, ಅವರು ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಕೆಲ ಹೊತ್ತಿನಲ್ಲಿ ಪ್ರಕರಣದ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews