ಬೆಂಗಳೂರು: ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದ ಬೆಂಗಳೂರಿನ ಕೆ.ಆರ್ ಪುರಂ ವ್ಯಾಪ್ತಿಯ ಬಿಎಲ್‌ಒ (BLO) ಅವರನ್ನ ನಲ್ಲಿ ಅಮಾನತು ಮಾಡಲಾಗಿದೆ.
ಬೆಸ್ಕಾಂ ಅಧಿಕಾರಿ ಆಗಿರುವ ಬಿಎಲ್‌ಒ ಯೋಗೇಶ್ ಗೌಡ ಅವರನ್ನ ಸಸ್ಪೆಂಡ್ ಮಾಡಲಾಗಿದೆ. ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ರೂ ಯೋಗೇಶ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಸಮಜಾಯಿಷಿ ನೀಡುವಂತೆ ನೋಟಿಸ್ ಜಾರಿ ಮಾಡಿದ್ರೂ ಉತ್ತರಿಸಲಿಲ್ಲ. ಈ ಕಾರಣಕ್ಕೆ ಅಮಾನತು ಮಾಡಲಾಗಿದೆ ಅಂತಾ ಆದೇಶ ಹೊರಡಿಸಲಾಗಿದೆ.
ಈಗಾಗಲೇ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕಡ್ಡಾಯ ಪಾಲ್ಗೊಳ್ಳುವಂತೆ ಸೂಚನೆ ಇದ್ರೂ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಅಂತಾ ಹಿರಿಯ ಆಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
