ವಿಜಯಪುರ: ಫೆಬ್ರವರಿ 4 ರಂದು ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ (Basavana Bagewadi) ಕ್ರಾಂತಿವೀರ ಬ್ರಿಗೇಡ್ (Krantiveera Brigade) ಉದ್ಘಾಟನೆ ನಡೆಯಲಿದೆ. 1,008 ಸಾದು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ.
ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ. ಇದಕ್ಕಾಗಿ ಜನವರಿ 12ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸ ಮಾಡಿ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಬ್ರಿಗೇಡ್ ಅನ್ನು ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು. ಇದನ್ನೂ ಓದಿ: ಚಿತ್ರಸಂತೆಗೆ ಚಾಲನೆ – ಮನೆಗೊಂದು ಕಲಾಕೃತಿ ಇರಬೇಕು: ಸಿಎಂ
Advertisement
Advertisement
ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ. ನನ್ನ ಜೀವನದಲ್ಲಿ ನಾನು ರಾಜಕಾರಣದ ಜೊತೆ ಜೊತೆಗೆ ಸಾಧು ಸಂತರ ಸೇವೆ ಮಾಡಿದ್ದೇನೆ. ಬ್ರಿಗೇಡ್ ಸ್ಥಾಪನೆ ಮಾಡೋದಕ್ಕೆ ಮುಖ್ಯ ಉದ್ದೇಶ ಹಿಂದುಳಿದ ಮಠಗಳ ಅಭಿವೃದ್ಧಿ. ಹಿಂದೂಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಇರಲಿದೆ ಎಂದು ಹೇಳಿದರು. ಇದನ್ನೂ ಓದಿ: ಸಚಿನ್ ಆತ್ಮಹತ್ಯೆ ಕೇಸ್ – ಬೀದರ್‌ನಲ್ಲಿ ಬಹುತೇಕ ತನಿಖೆ ಮುಕ್ತಾಯ, ಕಲಬುರಗಿಗೆ ತೆರಳಿದ ಸಿಐಡಿ ಟೀಂ
Advertisement
ರಾಜಕಾರಣದ ಜೊತೆಗೆ ಧಾರ್ಮಿಕ ಕಾರ್ಯದಲ್ಲೂ ನಾನು ಭಾಗಿಯಾಗುತ್ತಿದ್ದೇನೆ. ಈ ಹಿಂದೆ ಮಠ, ಮಂದಿರಗಳಿಗೆ ಹಣ ನೀಡುವಂತೆ ಮಾಡಿದ್ದು ನಾನೇ. ಹೀಗಾಗಿ ನಾನು ಧಾರ್ಮಿಕ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: Photo Gallery: ಬೆಂಗಳೂರಲ್ಲಿ ಚಿತ್ರಸಂತೆ – ಕಲಾಸಕ್ತರನ್ನು ಕೈಬೀಸಿ ಕರೆಯುತ್ತಿವೆ ಕಲಾಕೃತಿಗಳು..
Advertisement
ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ ನನ್ನ ವಿರುದ್ಧ ಆರೋಪ ಬಂದಾಗ ನಾನು ರಾಜೀನಾಮೆ ನೀಡಿದ್ದೇನೆ.ನಾನು ಆರ್‌ಎಸ್‌ಎಸ್‌ನಿಂದ ಬೆಳೆದು ಬಂದವನು. ಆರೋಪ ಬಂದ ತಕ್ಷಣವೇ ರಾಜೀನಾಮೆ ನೀಡಿದ್ದೇನೆ. ಕೆಲವರು ನನ್ನ ವಿರುದ್ಧ ರಾಜಕೀಯ ಮಾಡಿದರು. ಅವರು ಈಗ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯಾವುದೇ ಮಂತ್ರಿ, ಶಾಸಕರ ಮಕ್ಕಳು ಬಸ್‌ನಲ್ಲಿ ಓಡಾಡಲ್ಲ: ಟಿಕೆಟ್ ದರ ಏರಿಕೆಗೆ ಹೆಚ್‌ಡಿಕೆ ಕಿಡಿ
ನನ್ನ ವಿರುದ್ಧ ಕೆಲವರು ಕೆಲಸ ಮಾಡಿದ್ದರು, ಅವರಿಗೆ ದೇವರೇ ಉತ್ತರ ನೀಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ಅವರಿಗೆ ದೇವರು ಒಳ್ಳೆದು ಮಾಡುತ್ತಾರೆ. ಇನ್ನು ನನ್ನ ವಿರುದ್ಧ ಕೆಲಸ ಮಾಡಿದವರು ಯಾರು, ಯಾವ ಪಕ್ಷದವರು ಅನ್ನೋದನ್ನ ಸಮಯ ಬಂದಾಗ ಗೊತ್ತಾಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗುಜರಾತ್‌ನ ಪೋರಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು