Bengaluru RuralDistrictsKarnatakaLatestMain Post

ಕರವೇ ಪ್ರತಿಭಟನೆ- ಬೆಂಗಳೂರು, ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Advertisements

ನೆಲಮಂಗಲ: ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಕನ್ನಡಿಗರ ವಾಹನಗಳಿಗೆ ಕಲ್ಲು ತೂರಿದ ಎಂಇಎಸ್ ಪುಂಡರ ಕೃತ್ಯವನ್ನು ಖಂಡಿಸಿ ನಗರದಲ್ಲಿ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಮಾಕಳಿ ಬಳಿ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಹೀಗಾಗಿ ಕೆಲಕಾಲ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕರವೇ ಕಾರ್ಯಕರ್ತರು ಎಂಇಎಸ್ ಪುಂಡರಿಗೆ ಹಾಗೂ ಸಂಘಟನೆಗೆ ಬೆಂಬಲ ನೀಡುತ್ತಿರುವ ರಾಜಕಾರಣಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಂಇಎಸ್ ಸಂಘಟನೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸಿಗರು: ಶ್ರೀರಾಮುಲು

ಕರವೇ ನಾರಾಯಣ ಗೌಡ ಬಣದ ಮಂಜೇಗೌಡ ನೇತೃತ್ವದಲ್ಲಿ ಕಾರ್ಯಕರ್ತರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿ, ರಸ್ತೆ ತೆರವುಗೊಳಿಸಿದರು. ಇದನ್ನೂ ಓದಿ: ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು: ಲಕ್ಷ್ಮಿ ಹೆಬ್ಬಾಳ್ಕರ್

Leave a Reply

Your email address will not be published.

Back to top button