– ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ
ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಇನ್ನೂ ಬೆಂಗಳೂರು ಅಭಿವೃದ್ಧಿ (Bengaluru Development) ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ.
ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ ಮಾಡಿ ರಿಸಲ್ಟ್ ಕೊಡಬೇಕು. ಸಿಎಂ ಅವರಿಗೆ ಯಾವ ಸ್ಪಷ್ಟತೆ ಇರಬೇಕು ಎಂದು ಮನವರಿಕೆ ಮಾಡಿದ್ದೇನೆ. ಆದಷ್ಟು ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮತ್ತೆ ಸದ್ದು ಮಾಡಿದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ – ಏರ್‌ಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್
ಕರ್ನಾಟಕದ ಕಠಿಣ ಜವಾಬ್ದಾರಿಗಳಲ್ಲಿ ಬೆಂಗಳೂರು ಖಾತೆ ಕೂಡ ಒಂದು. ಸಿಎಂ ಖಾತೆ ಬಗ್ಗೆ ಸ್ಪಷ್ಟತೆ ನೀಡಿದ ನಂತರ ನಾನು ಮುಂದುವರೆಯುತ್ತೇನೆ. ಅಧಿಕಾರ ಒಂದೇ ನೋಡೋದಲ್ಲ, ಮುಂದೆ ನಾನು ಉತ್ತರ ಕೊಡಬೇಕಾಗುತ್ತದೆ. ಸ್ಪಷ್ಟತೆ ಇಲ್ಲದೇ ಕೆಲಸ ಮಾಡಲು ಹೋದರೆ ತೊಂದರೆಯಾಗುತ್ತದೆ. ಸಿಎಂ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಹೈಕಮಾಂಡ್ ನಾಯಕರ ಗಮನದಲ್ಲಿ ಈ ವಿಷಯ ಇದೆ. ಹೈಕಮಾಂಡ್ ಸಹ ಸಿಎಂ ಜೊತೆ ಸಮಾಲೋಚನೆ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಡಿವೈಡರ್‌ಗೆ ಬೈಕ್ ಡಿಕ್ಕಿ – ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು
