– ದಪ್ಪ ಚರ್ಮದವರನ್ನ ಹೇಗೆ ದಾರಿಗೆ ತರೋದು ಗೊತ್ತಿದೆ; ಬಿಸಿ ಮುಟ್ಟಿಸಿದ ಸಚಿವ
ಬೆಂಗಳೂರು: ಎಸಿಗಳು, ತಹಶೀಲ್ದಾರರು (Tahsildar) ಕಡ್ಡಾಯವಾಗಿ ಇನ್ನು ಮುಂದೆ ಜನರಿಗೆ ಸಿಗಬೇಕು. ಜನರ ಆಶಯಗಳ ವಿರುದ್ಧ ಅಧಿಕಾರಿಗಳು ನಡೆದುಕೊಂಡ್ರೆ ಅಂತಹ ಅಧಿಕಾರಿಗಳ ಮೇಲೆ ಕೇಸ್ ದಾಖಲು ಮಾಡೋದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಎಚ್ಚರಿಕೆ ನೀಡಿದ್ದಾರೆ.
ಭೂ ಸುರಕ್ಷಾ ಯೋಜನೆಯಲ್ಲಿ ಹಿಂದೆ ಬಿದ್ದಿದ್ದ ಬೆಂಗಳೂರು ನಗರ (Bengaluru City) ಮತ್ತು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಎಸಿಗಳು, ತಹಶೀಲ್ದಾರರು, ಶಿರಸ್ತೇದಾರರ ಸಭೆಯನ್ನು ಶುಕ್ರವಾರ ಸಚಿವರು ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವರು ಜನರ ಆಶಯದಂತೆ ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಯೋಜನೆ ನಿಗದಿತ ಸಮಯಕ್ಕೆ ಪೂರ್ಣಗೊಳಿಸದ ಗುತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಿ – ಪ್ರಿಯಾಂಕ್ ಖರ್ಗೆ ಸೂಚನೆ
ಆನ್‌ಲೈನ್ ಸರ್ಟಿಫಿಕೇಶನ್ ವಿತರಣೆ ವಿಚಾರವನ್ನು ತಹಶೀಲ್ದಾರರು ಉದ್ದೇಶಪೂರ್ವಕವಾಗಿ ಬ್ಲಾಕ್ ಮಾಡಿದ್ದಾರೆ. ರಾಜ್ಯದಾದ್ಯಂತ 21 ಲಕ್ಷ ಪುಟ ವಿತರಣೆ ಆಗಿದ್ದರೆ, ಬೆಂಗಳೂರು ನಗರ-ಗ್ರಾಮಾಂತರದಲ್ಲಿ ಕೇವಲ 27 ಪುಟ ವಿತರಣೆ ಆಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
ಬೆಂಗಳೂರು ನಗರ-ಗ್ರಾಮೀಣ ಜಿಲ್ಲೆಯ ತಹಶೀಲ್ದಾರರು ಕಚೇರಿಗೆ ಹೋಗಲ್ಲ. ನಿಮಗೆ ಬೇರೆಲ್ಲಿ ಕಚೇರಿ ಇದೆ ಎಂಬುದೇ ನಮಗೆ ಗೊತ್ತಿಲ್ಲ. ಇಲ್ಲಿವರೆಗೆ ನಾವೂ ಸಹಿಸಿಕೊಂಡಿದ್ದೇನೆ. ಇನ್ನೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಧಿಕಾರಿಗಳು ದಾರಿಗೆ ಬರದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ತಮ್ಮ ಆಫೀಸಲ್ಲಿ ಏನ್ ನಡೀತಾ ಇದೆ ಅಂತ ತಹಶೀಲ್ದಾರ್‌ಗಳಿಗೇ ಗೊತ್ತಿಲ್ಲ ಅಂದ್ರೆ ಏನರ್ಥ? ಕೆಲಸ ಮಾಡ್ರಿ ಅಂದ್ರೆ ನೆಪ ಹೇಳ್ತೀರಲ್ರಿ, ನಿಮಗೆ ನಾಚಿಕೆ ಆಗಲ್ವ? ಎಂದು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಇದು ಸಿಎಂ ಅಳಿವು-ಉಳಿವಿನ ಸಮಾವೇಶ, ಜನರ ಸಾವಿನ ಮೇಲೆ ಮೈಸೂರು ಸಾಧನಾ ಸಮಾವೇಶ – ಆರ್.ಅಶೋಕ್ ಲೇವಡಿ
ಎಸಿಗಳು, ತಹಶೀಲ್ದಾರರು ಕಡ್ಡಾಯವಾಗಿ ಜನರ ಕೈಗೆ ಸಿಗಬೇಕು. ಅವರ ಸಮಸ್ಯೆ ಪರಿಹಾರ ಮಾಡಬೇಕು. ಇದನ್ನ ಕಡ್ಡಾಯವಾಗಿ ಮಾಡಬೇಕು. ಆಗೋ ಕೆಲಸ ಮಾಡಬೇಕು. ಆಗದೇ ಇರೋದಕ್ಕೆ ಪತ್ರ ಕೊಡಬೇಕು. ಕಚೇರಿಯಲ್ಲಿ ಎಂಟ್ರಿ ಇಲ್ಲದೆ ಹೊರಗೆ ಹೋದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಡಲಾಗಿದೆ ಎಂದಿದ್ದಾರೆ
ಇದಕ್ಕೂ ಬಗ್ಗಿಲ್ಲ ಅಂದರೆ ಬೇರೆ ಮಾರ್ಗದಲ್ಲಿ ನಾವು ಸುಧಾರಣೆ ಮಾಡ್ತೀವಿ. ದಪ್ಪ ಚರ್ಮದವರನ್ನು ಹೇಗೆ ದಾರಿಗೆ ತರೋದು ಗೊತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಸಾರ್ವಜನಿಕರ ವಿರುದ್ಧ ಕೆಲಸ ಮಾಡಿದ್ರೆ ಅಂತ ಅಧಿಕಾರಿಗಳ ಮೇಲೆ ಕೇಸ್ ಹಾಕಲಾಗುವುದು. ಅಲ್ಲದೇ ಭೂಸುರಕ್ಷಾ ಯೋಜನೆಗೆ ವೇಗ ಕೊಡುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
ಇನ್ನು ಬಿಬಿಎಂಪಿ ವ್ಯಾಪ್ತಿಯ ನಿವೇಶನಗಳಿಗೆ ಬಿ ಖಾತೆಯಿಂದ ಎ ಖಾತೆಗೆ ದಾಖಲಾತಿ ಕೊಡೋ ವಿಚಾರಕ್ಕೆ ಪ್ರತಿಕ್ರಿಯಿಸಿದಅವರು, ರೂಲ್ಸ್ ಡ್ರಾಫ್ಸ್ ಆಗಿದೆ. ಕೂಡಲೇ ಜಾರಿ ಮಾಡಬೇಕು ಅನ್ನೋ ಉದ್ದೇಶ ಇದೆ. ಇದರಿಂದ ಎಷ್ಟೋ ಜನರಿಗೆ ಅನುಕೂಲ ಆಗಲಿದೆ. ಕೆಲವು ಕಾನೂನು ತಿದ್ದುಪಡಿ ಆಗಬೇಕು. ಆದಷ್ಟು ಬೇಗ ಕಾನೂನು ತಿದ್ದುಪಡಿ ಮಾಡಿ ಜಾರಿ ಮಾಡ್ತೀವಿ ಎಂದು ತಿಳಿಸಿದ್ದಾರೆ.