ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ – ಕೃಷ್ಣಬೈರೇಗೌಡ

Public TV
1 Min Read
Krishna Byregowda

ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ (Disabled Monthly Pension) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್, ವಿಕಲಚೇತನರ ಪಿಂಚಣಿ ಹೆಚ್ಚಳ ಮಾಡುವಂತೆ ಒತ್ತಾಯ ಮಾಡಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲ ಎಂದು ನುಡಿದರು. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ

ಸಾಮಾಜಿಕ ಭದ್ರತೆ ಯೋಜನೆ (Social Security Scheme) ಅಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ. ಹಣ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

ಮುಂದುವರಿದು, ಕೇಂದ್ರ ಸರ್ಕಾರ 14 ವರ್ಷಗಳಿಂದ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇಂದ್ರ ಸರ್ಕಾರ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡ್ತಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹಣ ಕೊಡ್ತಿದೆ. ಕೇಂದ್ರ ಸರ್ಕಾರ 200-300 ರೂ ಮಾತ್ರ ಪ್ರತಿಯೊಬ್ಬರಿಗೆ ಕೊಡ್ತಿದೆ. ಆದ್ರೆ ನಮ್ಮ ಸರ್ಕಾರ 800 ರೂ, 2,000 ರೂ. ಕೊಡ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದ್ರೆ ನಾವು ಮಾಡುವ ಬಗ್ಗೆ ಪರಿಶೀಲನೆ ಮಾಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: Nepal Plane Crash; ಟೇಕಾಫ್‌ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು

Share This Article