ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ. 2ದಿನ ಸರಳವಾಗಿ ಆಚರಣೆ ನಡೆಯಲಿದೆ.
ಉಡುಪಿಯಲ್ಲಿ ಅಷ್ಟಮಿ ಆಚರಣೆಗೆ ಕೊರೊನಾ ಈ ಬಾರಿ ಅಡ್ಡಗಾಲು ಹಾಕಿದೆ. ಅಗಸ್ಟ್ 30 ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಅಗಸ್ಟ್ 30 ಬೆಳಗ್ಗೆಯಿಂದಲೇ ಶ್ರೀಕೃಷ್ಣ ಭಕ್ತರು ಉಪವಾಸ ಇರುತ್ತಾರೆ. ಅಂದು ರಾತ್ರಿ 12. 17ಕ್ಕೆ ಸರಿಯಾಗಿ ಶ್ರೀಕೃಷ್ಣನಿಗೆ ಅಘ್ರ್ಯ ಪ್ರದಾನವಾಗಲಿದೆ. ಆ ನಂತರ ಲೀಲೋತ್ಸವ ಚಟುವಟಿಕರ ಆರಂಭ ಆಗುತ್ತವೆ. ಇದನ್ನೂ ಓದಿ: ಪಿ.ವಿ. ಸಿಂಧುಗೆ ಮೆಗಾ ಸ್ಟಾರ್ ಸನ್ಮಾನ
Advertisement
Advertisement
ಅಗಸ್ಟ್ 31 ರಥಬೀದಿಯಲ್ಲಿ ಶ್ರೀ ಕೃಷ್ಣನ ಲೀಲೋತ್ಸವ ಕಾರ್ಯಕ್ರಮ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು, ಆದರೆ ಕೊರೊನಾ ಸಾಂಕ್ರಾಮಿಕ ಇರುವ ಕಾರಣ ಈ ಬಾರಿ ನಿಗದಿತ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರ್ಮಿಕ ವಿಧಿ-ವಿಧಾನಗಳು ಪ್ರತಿವರ್ಷದಂತೆ ನಡೆಯುತ್ತದೆ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ. ಇದನ್ನೂ ಓದಿ: ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ
Advertisement
Advertisement
ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ. ರಥಬೀದಿಯಲ್ಲಿ ಗುರ್ಜಿಗಳನ್ನು ಹಾಕಲಾಗಿದೆ. ಗೊಲ್ಲ ವೇಷದಾರಿಗಳು ಮಡಕೆ ಒಡೆಯುವ ಸಂಪ್ರದಾಯವನ್ನು ಮಾಡಲಿದ್ದಾರೆ. ಶ್ರೀಕೃಷ್ಣನ ಮಣ್ಣಿನ ಮೂರ್ತಿಯನ್ನು ರಥಬೀದಿಯಲ್ಲಿ ಉತ್ಸವ ಮಾಡಲಾಗುತ್ತದೆ.
ಕೃಷ್ಣ ಮಠ ಪರ್ಯಾಯ ಅದಮಾರು ಮಠ ಮತ್ತು ಅಷ್ಟ ಮಠಗಳಿಗೆ ಸಂಬಂಧಪಟ್ಟಂತ ಸ್ವಾಮೀಜಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಭಕ್ತರಿಗೆ ಕೃಷ್ಣ ಲೀಲೋತ್ಸವ ಕಾರ್ಯಕ್ರಮಕ್ಕೆ ರಥಬೀದಿಗೆ ಪ್ರವೇಶ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ಹೊರಡಿಸಿದೆ. ಜನಜಂಗುಳಿ ಸೇರುವ ಅವಕಾಶ ಇಲ್ಲ ಎಂದು ಪೊಲೀಸ್ ಇಲಾಖೆ ಸೂಚಿಸಿದೆ.