ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾರಾಯಣಪುರ ಜಲಾಶಯದಿಂದ 1 ಲಕ್ಷ 2 ಸಾವಿರ 240 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ. ನಾರಾಯಣಪುರ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಬರೋಬ್ಬರಿ 18 ಗೇಟ್‍ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.
Advertisement
Advertisement
ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಳವಾದ ಪರಿಣಾಮ ದೇವದುರ್ಗದ ಗದ್ದೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಈ ದೇವಾಲಯ ಹೂವಿನಹೆಡಗಿ ಸೇತುವೆ ಕೆಳಗೆ ಇದೆ. ಶುಕ್ರವಾರ ಕೃಷ್ಣಾ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗಿತ್ತು. ನದಿಗೆ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ರಾಯಚೂರಿನ ಲಿಂಗಸುಗೂರಿನ ಶೀಲಹಳ್ಳಿ ಹಾಗೂ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರೀಡ್ಜ್ ಬಳಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.
Advertisement
ತಾಲೂಕು ಆಡಳಿತ, ಪಂಚಾಯತ್, ಅಗ್ನಿಶಾಮಕ ದಳ ಅಧಿಕಾರಿಗಳು ಸುರಕ್ಷತಾ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜೊತೆಗೆ ಕೃಷ್ಣಾ ನದಿಗೆ ಇಳಿಯದಂತೆ ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.