ಚಿತ್ರರಂಗ ಅಂದ ಮೇಲೆ ಇಲ್ಲಿ ಲವ್ ಸ್ಟೋರಿ ಎಲ್ಲಾ ಕಾಮನ್, ಒಂದಲ್ಲಾ ಒಂದು ಗಾಸಿಪ್ ವಿಷ್ಯವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಪ್ರಭಾಸ್ (Darling Prabhas) ಜೊತೆಗಿನ ಡೇಟಿಂಗ್ ವದಂತಿಗೆ ಕೃತಿ ಸನೂನ್ (Kriti Sanon) ಇದೀಗ ಬ್ರೇಕ್ ಹಾಕಿದ್ದಾರೆ.
ಟಿಟೌನ್ ಅಡ್ಡಾದಲ್ಲಿ ಸದ್ಯ ಸೌಂಡ್ ಮಾಡುತ್ತಿರುವ ವಿಷ್ಯಾ ಅಂದ್ರೆ ಪ್ರಭಾಸ್, ಕೃತಿ ಸನೂನ್ ಡೇಟಿಂಗ್ ವಿಚಾರ. ಇದೀಗ ಅದಕ್ಕೆಲ್ಲಾ ನಟಿ ಕೃತಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ವರುಣ್ ಧವನ್ (Varun Dhawan) ಸ್ವಲ್ಪ ವೈಲ್ಡ್ ಆಗಿ ನಡೆದುಕೊಂಡರು ಅಷ್ಟೇ. ತಮಾಷೆಗೆ ಆಡಿದ ಮಾತಿನಿಂದ ಸಾಕಷ್ಟು ವದಂತಿಗಳು ಹುಟ್ಟಿಕೊಂಡಿವೆ. ಬೇರೆ ಯಾವುದೋ ಮಾಧ್ಯಮದವರು ನನ್ನ ಮದುವೆ ಡೇಟ್ ಅನೌನ್ಸ್ ಮಾಡುವ ಮುನ್ನ ನಾನೇ ಆ ಭ್ರಮೆಯನ್ನು ಹೊಡೆದುಹಾಕುತ್ತೇನೆ. ಎಲ್ಲ ವದಂತಿಗಳು ಆಧಾರರಹಿತವಾಗಿವೆ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕೃತಿ ಸನೋನ್ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಕಾರ್ಯವೊಂದರಲ್ಲಿ ಬಾಲಿವುಡ್ ನಟ ವರುಣ್ ಅವರು ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಕೃತಿ ಸನೂನ್ ಕೂಡ ಇದ್ದರು. ಕರಣ್ ಜೋಹರ್ ಕೇಳಿದ ಒಂದು ಪ್ರಶ್ನೆಗೆ ಉತ್ತರಿಸುವಾಗ ನಾಯಕಿಯರ ಪಟ್ಟಿ ಮಾಡಿದ ವರುಣ್ ಧವನ್ ಅವರು ಕೃತಿ ಹೆಸರನ್ನು ಕೈ ಬಿಟ್ಟಿದ್ದರು. ಯಾಕೆ ಎಂದು ಪ್ರಶ್ನಿಸಿದಾಗ ವರುಣ್ ಧವನ್ ಹೊಸ ವಿಷಯ ಬಾಯ್ಬಿಟ್ಟಿದ್ದರು. ಇದನ್ನೂ ಓದಿ: ಖ್ಯಾತ ಫ್ಯಾಷನ್ ಡಿಸೈನರ್ ಪುತ್ರಿ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ
ಈ ಲಿಸ್ಟ್‌ನಲ್ಲಿ ಕೃತಿ ಹೆಸರು ಇಲ್ಲ. ಯಾಕೆಂದರೆ ಅವರ ಹೆಸರು ಬೇರೆ ವ್ಯಕ್ತಿಯ ಹೃದಯದಲ್ಲಿದೆ. ಅವರು ಈಗ ಮುಂಬೈನಲ್ಲಿ ಇಲ್ಲ. ಈಗ ದೀಪಿಕಾ ಪಡುಕೋಣೆ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ ಎಂದು ವರುಣ್ ಧವನ್ ಹೇಳಿದ್ದ ವಿಡಿಯೋ ವೈರಲ್ ಆಗಿದೆ. `ಪ್ರಾಜೆಕ್ಟ್ ಕೆ’ ಚಿತ್ರಕ್ಕಾಗಿ ಪ್ರಭಾಸ್ ಅವರು ದೀಪಿಕಾ ಜೊತೆ ಶೂಟಿಂಗ್ ಮಾಡುತ್ತಿದ್ದಾರೆ. ಹಾಗಾಗಿ ವರುಣ್ ಹೇಳಿದ್ದು ಪ್ರಭಾಸ್ ಬಗ್ಗೆಯೇ ಎಂದು ಎಲ್ಲರೂ ಊಹಿಸುತ್ತಿದ್ದಾರೆ. ವದಂತಿ ಹೆಚ್ಚಾಗುವುದಕ್ಕೂ ಮುನ್ನವೇ ಕೃತಿ ಸನೂನ್ ಅವರು ಸ್ಪಷ್ಟನೆ ನೀಡಿ, ಎಲ್ಲಾ ವದಂತಿಗೂ ನಟಿ ಬ್ರೇಕ್ ಹಾಕಿದ್ದಾರೆ.