ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿ ಮಾಡಬೇಕು ಎನ್ನುವ ಉದ್ದೇಶದಿಂದ ಬಸವಣ್ಣ, ಬುದ್ಧ, ಅಂಬೇಡ್ಕರ್ ಅವರ ತತ್ವದ ಆಧಾರದ ಮೇಲೆ ಪಕ್ಷವನ್ನು ಕಟ್ಟಿರುವೆ. ಯಾರ ಮೇಲೂ ಸಿಟ್ಟು, ದ್ವೇಷದಿಂದ ಪಕ್ಷವನ್ನು ಕಟ್ಟಿಲ್ಲ ಎಂದು ಕೆಆರ್‌ಪಿಪಿ (KRPP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಹೇಳಿದರು.
Advertisement
ಕೊಪ್ಪಳದ (Koppal) ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕೆಆರ್‌ಪಿಪಿ ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡ ಪಕ್ಷದ ಅಭ್ಯರ್ಥಿಗಳ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 12 ವರ್ಷಗಳ ಹಿಂದೆ ಜನಾರ್ದನ ರೆಡ್ಡಿಯವರು ಹಲವರನ್ನು ನಂಬಿಕೊಂಡು ಸಾಕಷ್ಟು ಜನರನ್ನು ಶಾಸಕರನ್ನಾಗಿ, ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಅವರೆಲ್ಲರೂ ನನಗೆ ಮೋಸ ಮಾಡಿ, ಬೆನ್ನಿಗೆ ಚೂರಿ ಹಾಕಿದ್ದಾರೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಂಡು ಕೂರಲು ನಾನು ಸಿದ್ಧನಿಲ್ಲ ಎಂದರು.
Advertisement
Advertisement
12 ವರ್ಷಗಳ ಕಾಲ ನಾನು ಜೈಲು ವಾಸವನ್ನು ಅನುಭವಿಸಿದ್ದೇನೆ. ಅದು ನನ್ನ ಫಸ್ಟ್ ಹಾಫ್ ಆದರೆ, ಸದ್ಯ ಸೆಕೆಂಡ್ ಹಾಫ್ ಪ್ರಾರಂಭವಾಗಿದೆ. ಇದು ಮುಂದಿನ 12 ವರ್ಷಗಳ ಕಾಲ ನಡೆಯಲಿದೆ. ಆಗ ಜನಾರ್ದನ ರೆಡ್ಡಿ ಏನು ಎನ್ನುವುದು ಎಲ್ಲರಿಗೂ ತಿಳಿಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್
Advertisement
ಅಭ್ಯರ್ಥಿಗಳ ಘೋಷಣೆ:
ಕೆಆರ್‌ಪಿಪಿ ಪಕ್ಷದ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆಯನ್ನು ಮಾಡಲಿದ್ದಾರೆ. ಈಗಾಗಲೇ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಬಳ್ಳಾರಿಯಿಂದ ಅರುಣಾಲಕ್ಷ್ಮೀ ಜನಾರ್ದನ ರೆಡ್ಡಿ, ಸಿಂಧನೂರಿನಿಂದ ನೆಕ್ಕಂಟಿ ಮಲ್ಲಿಕಾರ್ಜುನ, ಸಿರುಗುಪ್ಪದಿಂದ ಧರಪ್ಪ ನಾಯಕ, ಹಿರಿಯೂರು ಕ್ಷೇತ್ರದಿಂದ ಮಹೇಶ, ನಾಗಠಾಣ ಕ್ಷೇತ್ರದಿಂದ ಶ್ರೀಕಾಂತ್ ಅವರನ್ನು ಆಯ್ಕೆ ಮಾಡಿಕೊಂಡು ಅಭ್ಯರ್ಥಿಗಳು ಎಂದು ಘೋಷಣೆ ಮಾಡಲಾಗಿದೆ. ಇನ್ನೂ ಬಾಕಿ ಉಳಿದುಕೊಂಡಿರುವ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಘೋಷಣೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k