ಮಂಡ್ಯ: ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ನೀಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.
Advertisement
ಕಳೆದ ಒಂದು ತಿಂಗಳಿನಿಂದ ಕೆಆರ್ಎಸ್ ವಿಚಾರವಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ನಾಯಕರ ನಡುವೆ ವ್ಯಾಪಕ ಚರ್ಚೆಗಳು ನಡೆದಿದ್ದವು. ಈ ನಡುವೆ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಅಣೆಕಟ್ಟಗೆ ಅಪಾಯ ಎದುರಾಗಿದೆ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಹಾಗೂ ಇತರ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಈ ಗಣಿಗಾರಿಕೆಯನ್ನು ಸಂಪೂರ್ಣ ಬಂದ್ ಮಾಡಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದರು. ಈ ವೇಳೆ ಸುಮಲತಾ ಹಾಗೂ ಜೆಡಿಎಸ್ ನಾಯಕರ ನಡುವ ವಾಕ್ ಸಮರ ನಡೆದಿತ್ತು.
Advertisement
Advertisement
ಇದೀಗ ಇದರ ಬೆನ್ನಲೆ ಶುಕ್ರವಾರ ಸುಮಲತಾ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ನೀಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಕೆಆರ್ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ಅತಿರೇಕವಾಗಿ ನಡೆಯುತ್ತಿದೆ. ಇದರಿಂದ ಕೆಆರ್ಎಸ್ ಅಣೆಕಟ್ಟೆಗೆ ಅಪಾಯ ಎದುರಾಗಿದೆ. ಹೀಗಾಗಿ ಮುಂದೆ ಸಂಭವಿಸಬಹುದಾದ ಅಪಾಯ ಕುರಿತು ವಾಸ್ತವಾಂಶವನ್ನು ತರಲಾಗಿದೆ. ಈ ಕುರಿತು ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:ನಾನು ತಪ್ಪು ಮಾಡಿಲ್ಲ, ಗ್ರಾಫಿಕ್ಸ್ನಲ್ಲಿ ಏನು ಬೇಕಾದರೂ ಮಾಡಬಹುದು: ರೇಣುಕಾಚಾರ್ಯ
Advertisement