ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಡ್ಯಾಂ ಮೇಲೆ ಯುವಕನ ಅಂಧ ದರ್ಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಾಹನವನ್ನು ಕೊಟ್ಟಿದ್ದ ಪೊಲೀಸಪ್ಪನನ್ನು ಇದೀಗ ಅಮಾನತು ಮಾಡಲಾಗಿದೆ.
Advertisement
ಅಣೆಕಟ್ಟಿನ ಮೇಲೆ ಪೊಲೀಸ್ ಜೀಪ್ ಚಲಾಯಿಸಿದ್ದಲ್ಲದೇ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದ ಆರೋಪದ ಮೇಲೆ ಸ್ವಾಮಿ. ಎಸ್.ಬಿಯನ್ನು ಸಸ್ಪೆಂಡ್ ಮಾಡಲಾಗಿದೆ. ಸ್ವಾಮಿ ಅವರು ಕರ್ನಾಟಕ ಕೈಗಾರಿಕಾ ಭದ್ರತೆಯ 3ನೇ ಪಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
Advertisement
ಫೆಬ್ರವರಿ 09 ರಂದು ಸಂಜೆ 4 ಗಂಟೆ ಸುಮಾರಿಗೆ ಯುವಕ ಸರ್ಕಾರಿ ಜೀಪ್ ಚಲಾಯಿಸುತ್ತಿದ್ದರೆ ಪೊಲೀಸ್ ಅಧಿಕಾರಿ ಮಾತ್ರ ಪಕ್ಕದಲ್ಲಿ ಕೂತು ಮೊಬೈಲ್ ನಲ್ಲಿ ಶೂಟ್ ಮಾಡಿದ್ದರು. ಈ ಕುರಿತು ಫೆಬ್ರವರಿ 27 ರಂದು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಯಿಂದಲೇ ನಿಯಮ ಉಲ್ಲಂಘನೆ ಅಂತ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದನ್ನುಓದಿ: KRS ಅಣೆಕಟ್ಟೆ ಮೇಲೆ ಪೊಲೀಸ್ ಜೀಪ್ ಓಡಿಸಿದ ಯುವಕ
Advertisement
Advertisement
ಇದೀಗ ಪೊಲೀಸ್ ಇಲಾಖೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಸಸ್ಪೆಂಡ್ ಆದೇಶ ಹೊರಡಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಡ್ಯಾಂ ಮೇಲೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿದರೂ ಯುವಕ ದರ್ಬಾರ್ ಮಾಡಲು ಅವಕಾಶ ನೀಡಲಾಗಿರುವುದರಿಂದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.