ಮೈಸೂರು: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ, ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ನದಿ ತೀರದ ಜನರಿಗೆ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 10,000ದಿಂದ 20,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಮಳೆ ಅವಾಂತರ- ಹೂ ತೋಟಗಳು ಜಲಾವೃತ
ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಿದೆ.