ಮಂಡ್ಯ: ಕೆಆರ್ ಎಸ್ ಜಲಾಶಯದಲ್ಲಿ ನೂರು ಅಡಿ ನೀರು ಸಂಗ್ರವಾಗಿದೆ. ಇದರಿಂದ ಇನ್ಮುಂದೆ ಕೃಷಿಗೆ ನೀರು ಲಭ್ಯವಾಗುತ್ತದೆ ಎನ್ನುವುದನ್ನು ಅರಿತ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕಾವೇರಿ ನದಿ ಸಮೀಪದಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಕೆಆರ್ ಎಸ್ ಅಣೆಕಟ್ಟು 124.80 ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಹೊಂದಿದ್ದು, ಅದರಲ್ಲಿ ಈಗಾಗಲೇ 100 ಅಡಿ ಸಂಗ್ರಹವಾಗಿದೆ. ಅಣೆಕಟ್ಟಿನಲ್ಲಿ ನೀರು ತುಂಬಿರುವುದರಿಂದ ಸದ್ಯ ಜಿಲ್ಲೆ ಹಾಗೂ ನೆರೆ ಜಿಲ್ಲೆಯ ರೈತರ ಸಂತಸಕ್ಕೆ ಕಾರಣವಾಗಿದೆ.
Advertisement
2017ರಲ್ಲಿ ಇದೇ ಸಮಯದಲ್ಲಿ ಅಣೆಕಟ್ಟೆಯಲ್ಲಿ ಕೇವಲ 68 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ನೀರಿನ ಸಂಗ್ರಹದಲ್ಲಿ ಒಂದಷ್ಟು ಏರಿಕೆಯಾಗಿದೆ. ಕಳೆದ ವರ್ಷ ಕೇವಲ 114 ಅಡಿಗಳಷ್ಟು ಮಾತ್ರ ಗರಿಷ್ಠವಾಗಿ ನೀರು ಸಂಗ್ರಹವಾಗಿತ್ತು. ಅಷ್ಟೇ ಅಲ್ಲದೆ ಸತತ ಮೂರು ವರ್ಷಗಳಿಂದ ಅಣೆಕಟ್ಟು ಭರ್ತಿಯಾಗದೇ ರೈತರು ಸಂಕಷ್ಟ ಅನುಭವಿಸಿದ್ದರು.
Advertisement
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.