ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಮುಂದಿವರಿದಿರುವ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂನ (KRS Dam) ಒಳಹರಿವು ಏರಿಕೆ ಕಂಡಿದೆ.
ಹಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಮಳೆಯ ಪ್ರಮಾಣ ಕಡಿಮೆ ಇದ್ದ ಪರಿಣಾಮ ಹೆಚ್ಚು ನೀರು ಬರುತ್ತಿರಲಿಲ್ಲ. ನಿನ್ನೆಯಿಂದ ಮಳೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆ 33,052 ಕ್ಯೂಸೆಕ್ ಒಳಹರಿವು ಬರುತ್ತಿದೆ. ಜೂನ್ ಅಂತ್ಯದಲ್ಲಿಯೇ ಕೆಆರ್‌ಎಸ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಡ್ಯಾಂನಿಂದ 31,550 ಕ್ಯೂಸೆಕ್ ನೀರನ್ನ ನದಿಗೆ ಹರಿಸಲಾಗುತ್ತಿದೆ. ಇದನ್ನೂ ಓದಿ: ದರ್ಶನ್ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಡ್ಯಾಂ ಮುಂಭಾಗ ಹಾಲ್ನೊರೆಯಂತೆ ಕಾವೇರಿ ನದಿಯ ಸೌಂದರ್ಯ ಕಂಗೊಳಿಸುತ್ತಿದೆ. ಸದ್ಯ 124.80 ಅಡಿಗಳ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 124.54 ಅಡಿಗಳಷ್ಟು ಭರ್ತಿಯಾಗಿದ್ರೆ, 49.452 ಟಿಎಂಸಿ ಗರಿಷ್ಠ ಸಾಮರ್ಥ್ಯವಿರುವ ಡ್ಯಾಂನಲ್ಲಿ 49.089 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ. ಇದನ್ನೂ ಓದಿ: ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ – 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ