ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಅವಧಿಗೂ ಮುನ್ನವೇ ಭರ್ತಿಯಾಗಿದೆ.
124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯ ತುಂಬಿರುವುದರಿಂದ ಹಳೆ ಮೈಸೂರು ಭಾಗದ ಜನರಲ್ಲಿ ಸಂತಸ ಮನೆ ಮಾಡಿದ್ರೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಉಂಟುಮಾಡಿದೆ. ಕೆಆರ್‌ಎಸ್ ಜಲಾಶಯ ಕಳೆದ ವರ್ಷ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಭರ್ತಿಯಾಗಿತ್ತು. ಆದರೆ ಈ ಬಾರಿ ಜುಲೈ ತಿಂಗಳ 2ನೇ ವಾರದಲ್ಲೇ ಭರ್ತಿಯಾಗಿದೆ. ಇದನ್ನೂ ಓದಿ: ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ
Advertisement
Advertisement
ಕೆಆರ್‌ಎಸ್‌ನ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ 6ನೇ ಬಾರಿಗೆ ಭರ್ತಿಯಾಗಿದೆ. ಈ ಹಿಂದೆ 1980, 2006, 2007, 2009, 2018ರಲ್ಲಿ ಭರ್ತಿಯಾಗಿತ್ತು. ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಲ್ಲಿ ಮೌನ ಮುರಿದ ಶಾರುಖ್ ಖಾನ್ ಪತ್ನಿ
Advertisement
ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಕಾವೇರಿ ನದಿ ತೀರದಲ್ಲಿ ನೆರೆ ಭೀತಿ ಉಂಟಾಗಿದೆ. ಕೆಆರ್‌ಎಸ್ ಡ್ಯಾಂನಿಂದ 75,000 ದಿಂದ 1,50,000 ಲಕ್ಷ ಕ್ಯೂಸೆಸ್ ನೀರು ಬಿಡುವ ಸಾಧ್ಯತೆಯಿದೆ. ಆದ್ದರಿಂದ ನದಿಪಾತ್ರದ ಜನರು ಆಸ್ತಿ ಪಾಸ್ತಿ, ಜಾನುವಾರು ರಕ್ಷಣೆಗೆ ಮುಂಜಾಗ್ರತ ಕ್ರಮ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮ ಕೆಆರ್‌ಎಸ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಚ್ಚರಿಕೆ ನೀಡಿದ್ದಾರೆ.
Advertisement
1,50,000 ಕ್ಯೂಸೆಕ್ ನೀರು ಬಿಟ್ಟರೆ ಕೆಲ ಗ್ರಾಮಗಳಿಗೆ ನೀರು ನುಗ್ಗುವ ಭೀತಿಯಿದ್ದು, ನೂರಾರು ಎಕರೆ ಜಮೀನು ಜಲಾವೃತ ಸಾಧ್ಯತೆ ಎಂದು ಹೇಳಲಾಗಿದೆ.