ಮಂಡ್ಯ: ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೆ (Rain) ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ (Cauvery Basin) ಮಳೆ ಸುರಿಯದೇ ಇರುವುದು ಈಗ ಆತಂಕಕ್ಕೆ ಕಾರಣವಾಗಿದೆ.
ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಲ್ಲಿ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ (KRS Dam) ನೀರಿನ ಮಟ್ಟ (Water Level) ಕುಸಿದಿದೆ. ಸದ್ಯ ಕೆಆರ್‌ಎಸ್ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?
Advertisement
Advertisement
ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡಿರುವುದರಿಂದ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.
Advertisement
Advertisement
ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರಿಗೆ ಅಗತ್ಯವಿರುವಷ್ಟುನೀರು ಮಾತ್ರ ಸಂಗ್ರಹವಾಗಿದೆ. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಬೇಸಿಗೆ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿತ್ತು.