80 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ – ಕುಡಿಯುವ ನೀರಿಗೆ ಶುರುವಾಗಿದೆ ಆತಂಕ

Public TV
1 Min Read
KRS DAM

ಮಂಡ್ಯ: ಜೂನ್ 3ನೇ ವಾರಕ್ಕೆ ಬಂದರೂ ಸಹ ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಇನ್ನೂ ಮಳೆಯಾಗಿಲ್ಲ. ಇದರ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂನ (KRS) ನೀರಿನ ಮಟ್ಟ 80 ಅಡಿಗೆ ಕುಸಿದಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆಯಾಗದೇ (Rain) ಇದ್ದರೆ ಕಾವೇರಿ ನೀರನ್ನು ಅವಲಂಬಿಸಿರುವ ಜನರು ಕುಡಿಯುವ ನೀರಿಗೂ ಸಮಸ್ಯೆ ಎದುರಿಸಬೇಕಾದ ದಿನಗಳು ಬರಲಿವೆ.

KRS DAM 1

ಈಗಾಗಲೇ ಡ್ಯಾಂನ ಗೇಟ್‍ನ ಬಳಿ ನೀರಿಲ್ಲ. ಇಂತಹ ಪರಿಸ್ಥಿತಿ ಬಂದರೆ ಇರುವ ನೀರನ್ನು ಬಳಕೆ ಮಾಡಿಕೊಳ್ಳಲು, ಮುನ್ನೆಚ್ಚರಿಕೆಯಾಗಿ ಡ್ಯಾಂ ನಿರ್ಮಾಣದ ವೇಳೆಯೇ ಮಾಡಿರುವ ಒಳಭಾಗದ ನಾಲೆಯಿಂದ ಈಗ ಕುಡಿಯಲು ನೀರು ಬಿಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ಈ ನಾಲೆಯಿಂದಲೂ ನೀರು ಬಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು

ಈಗ ಡ್ಯಾಂನಲ್ಲಿ 10.811 ಟಿಎಂಸಿ ನೀರಿದೆ. ಈ ಪೈಕಿ 3.811 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದು. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಇದನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗದ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – ಸಿಕ್ಕಿಂನಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಸೇನೆ

ಕೆಆರ್‌ಎಸ್ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 80.06 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ -10.811 ಟಿಎಂಸಿ
ಒಳ ಹರಿವು – 289 ಕ್ಯೂಸೆಕ್
ಹೊರ ಹರಿವು – 3,109

Share This Article