ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿಯುತ್ತಿದೆ. ಸದ್ಯ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 106 ಅಡಿಗೆ ಕುಸಿದಿದೆ.
ಪ್ರತಿ ದಿನ ತಮಿಳುನಾಡಿಗೆ (Tamil Nadu) ನೀರಿನ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಮಂಡ್ಯ ರೈತರ ಹೋರಾಟಕ್ಕೆ ರಾಜ್ಯ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಇಂದು ಡ್ಯಾಂನಿಂದ ತಮಿಳುನಾಡಿಗೆ 12,776 ಕ್ಯೂಸೆಕ್ ನೀರು ಬಿಡಲಾಗಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ರೈತರು ಪ್ರತಿಭಟಿಸುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ
Advertisement
Advertisement
124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 106.68 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 28.515 ಟಿಎಂಸಿ ನೀರು ಇದೆ. ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯ ಬಂದ್‌ಗೆ ಈಗಾಗಲೇ ಬಿಜೆಪಿ ಕರೆ ಕೊಟ್ಟಿದೆ.
Advertisement
Advertisement
ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 106.68 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 28.515 ಟಿಎಂಸಿ
ಒಳಹರಿವು – 4878 ಕ್ಯೂಸೆಕ್
ಹೊರಹರಿವು – 15,373 ಕ್ಯೂಸೆಕ್ ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು
Web Stories