ಮಂಡ್ಯ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ.
ಕಳೆದ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಹೀಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದ ಒಳ ಹರಿವಿನ ಪ್ರಮಾಣ 9,438 ಕ್ಯೂಸೆಕ್‌ಗೆ ಏರಿಕೆ ಆಗಿದೆ.

ಸದ್ಯ 124.80 ಅಡಿ ಸಾಮರ್ಥ್ಯದ ಕೆಆರ್‌ಎಸ್ ಡ್ಯಾಂನಲ್ಲಿ 108.63 ಅಡಿ ನೀರು ಭರ್ತಿಯಾಗಿದ್ದು, 30.367 ಟಿಎಂಸಿ ನೀರಿದೆ. ಡ್ಯಾಂ ನಿಂದ 4,478 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಇದೇ ರೀತಿ ಒಳಹರಿವು ಹೆಚ್ಚಾದ್ರೆ ಶೀಘ್ರದಲ್ಲೇ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ, ಇದರೊಂದಿಗೆ ತಮಿಳುನಾಡಿಗೆ ನೀರಿನ ಸಮಸ್ಯೆಯೂ ಬಗೆಹರಿಯುವ ಸಾಧ್ಯತೆ ಇದೆ.
