ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ (Rain) ಹಿನ್ನೆಲೆ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) 5 ದಿನಕ್ಕೆ 15 ಟಿಎಂಸಿ ನೀರು ಸಂಗ್ರಹವಾಗಿದ್ದು, ನಾಳೆ (ಭಾನುವಾರ) ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣ ಭರ್ತಿಯಾಗಲಿದೆ.
ಸದ್ಯ 124.80 ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 120 ಅಡಿ ಭರ್ತಿಯಾಗಿದೆ. ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿ ಇದ್ದು, ನಾಳೆ ಸಂಜೆಯೇ ಸಂಪೂರ್ಣವಾಗಿ ಡ್ಯಾಂ ಭರ್ತಿಯಾಗಲಿದೆ. ಸದ್ಯ ಡ್ಯಾಂಗೆ 51,374 ಕ್ಯುಸೆಕ್ ಒಳಹರಿವು ಬರುತ್ತಿದೆ. ಇದನ್ನೂ ಓದಿ: KRS ಡ್ಯಾಂನಿಂದ ಕಾವೇರಿ ನದಿಗೆ 10,000 ಕ್ಯುಸೆಕ್‌ಗೂ ಅಧಿಕ ನೀರು ಬಿಡುಗಡೆ
Advertisement
Advertisement
ಮುಂಜಾಗ್ರತಾ ಕ್ರಮವಾಗಿ ನದಿಗೆ 4,714 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಹೊರಹರಿವಿನ ಪ್ರಮಾಣ ಯಾವ ಕ್ಷಣದಲ್ಲಾದರೂ ಹೆಚ್ಚಬಹುದು. ಹೀಗಾಗಿ ನದಿ ಪಾತ್ರದ ಜನರಿಗೆ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ. ಇನ್ನೂ ಕೆಆರ್‌ಎಸ್ ಡ್ಯಾಂ ಭರ್ತಿಯ ಅಂಚಿನಲ್ಲಿರುವ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಳೆ ಅಬ್ಬರ – 3 ಮನೆಗಳು ಧರೆಗೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Advertisement
Advertisement
ಕೆಆರ್‌ಎಸ್ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 120.00 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇAದಿನ ಸಾಂದ್ರತೆ – 42.916 ಟಿಎಂಸಿ
ಒಳ ಹರಿವು – 51,374 ಕ್ಯುಸೆಕ್
ಹೊರ ಹರಿವು – 4,714 ಕ್ಯುಸೆಕ್