ಮಂಡ್ಯ: ಯಾವುದೇ ಸಂದರ್ಭದಲ್ಲಾದರೂ ಕೆಆರ್‌ಎಸ್‌ನಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುಗಡೆ ಮಾಡುವುದರಿಂದ ನದಿ ಪಾತ್ರದ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕೆಆರ್‌ಎಸ್ ಅಣೆಕಟ್ಟಿನಿಂದ ಈಗಾಗಲೇ 1.27 ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟಿಗೆ ಹರಿದು ಬರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಯಾವುದೇ ಸಮಯದಲ್ಲಿ ಬೇಕಾದರೂ ಅಣೆಕಟ್ಟಿನಿಂದ ಸುಮಾರು 1 ಲಕ್ಷದ 50 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಮಗದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Advertisement
Advertisement
ಈಗಾಗಲೇ ಕಾವೇರಿ ನದಿ ದಂಡೆಯಲ್ಲಿರುವ ಕೆಲವೊಂದು ದೇವಾಲಯಗಳು ನೀರಿನಿಂದ ಆವೃತ್ತವಾಗಿದೆ. ನದಿಪಾತ್ರದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮತ್ತೆ ಹೊರಹರಿವು ಹೆಚ್ಚಾದರೆ, ಹೆಚ್ಚಿನ ನಷ್ಟ ಸಂಭವಿಸುವ ಭಯ ಶುರುವಾಗಿದೆ. ಇದರ ನಡುವೆ ಅಣೆಕಟ್ಟಿನಿಂದ ನೀರು ಹರಿದು ಹೋಗುವ ರುದ್ರ ರಮಣೀಯ ದೃಶ್ಯ ನೋಡಲು ಕೆಆರ್‍ಎಸ್‍ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv