ಮಂಡ್ಯ: ಕೆಆರ್ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, ಒಳ ಹರಿವು ಹೆಚ್ಚಿನ ಪ್ರಮಾಣದಲ್ಲಿ ಆರಂಭವಾದ ಒಂಬತ್ತೇ ದಿನಕ್ಕೆ ಕೆಆರ್ಎಸ್ ಅಣೆಕಟ್ಟೆ 124.80 ಅಡಿ ಗರಿಷ್ಠ ಮಟ್ಟ ತಲುಪಿದೆ.
ಜುಲೈ 6ರಂದು ಅಣೆಕಟ್ಟೆಯಲ್ಲಿ ಕೇವಲ 84.20 ಅಡಿ ನೀರಿತ್ತು. ಆದರೆ ಐದು ದಶಕಗಳ ಬಳಿಕ ದಾಖಲೆ ಮಟ್ಟದ ಒಳ ಹರಿವು ಬಂದ ಹಿನ್ನೆಲೆಯಲ್ಲಿ ಅಣೆಕಟ್ಟು ಭರ್ತಿಯಾಗಿದೆ. ಮುಂಜಾಗೃತಾ ಕ್ರಮವಾಗಿ ಜುಲೈ 9ರಿಂದ ಹೊರ ಹರಿವು ಬಿಡದೇ ಇದ್ದರೆ ನಾಲ್ಕೇ ದಿನಕ್ಕೆ ಡ್ಯಾಂ ಭರ್ತಿಯಾಗುತ್ತಿತ್ತು. 118 ಅಡಿ ಭರ್ತಿಯಾಗುತ್ತಿದ್ದಂತೆ ಅಣೆಕಟ್ಟು ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ನೀರು ಬಿಟ್ಟಿದ್ದರಿಂದ ಈಗ ಡ್ಯಾಂ ಭರ್ತಿಯಾಗಿದೆ.
Advertisement
Advertisement
ಒಳ ಹರಿವು ಇಳಿಮುಖವಾದ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಹೊರ ಹರಿವು ಕಡಿಮೆ ಮಾಡಲಾಗಿತ್ತು. ಡ್ಯಾಂ ಸಂಪೂರ್ಣ ಭರ್ತಿಮಾಡಿಕೊಳ್ಳಲು ಹೊರ ಹರಿವು ಕಡಿಮೆ ಮಾಡಲಾಗಿತ್ತು.
Advertisement
ಕೆಆರ್ಎಸ್ ಜಲಾಶಯದ ನೀರಿನ ಗರಿಷ್ಟ ಮಟ್ಟ 124.80 ಅಡಿ ಆಗಿದ್ದು, ಇಂದು 124.80 ಅಡಿ ಇದೆ. ಜಲಾಶಯ ಒಳ ಹರಿವು 18,769 ಕ್ಯೂಸೆಕ್ ಆಗಿದ್ದು, 5,168 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. ಪ್ರಸ್ತುತ 49.452 ಟಿಎಂಸಿ ನೀರು ಸಂಗ್ರಹವಾಗಿದೆ.
Advertisement
ಕಾವೇರಿ ಜಲಾನಯನ ಪ್ರದೇಶ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೇಮಾವತಿ ಮತ್ತು ಹಾರಂಗಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತಿತ್ತು. ಪರಿಣಾಮ ಭಾನುವಾರ ಸಂಜೆ 2,05,852 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಸೋಮವಾರ ಬೆಳಗ್ಗೆ 2.04 ಲಕ್ಷ ಕ್ಯೂಸೆಕ್ ಇತ್ತು.
ಸೋಮವಾರ ಬೆಳಗ್ಗೆ 122.40 ಅಡಿ ಇದ್ದ ನೀರಿನ ಮಟ್ಟವು ಹೊರ ಹರಿವಿನಿಂದ ಹೆಚ್ಚಳದಿಂದಾಗಿ ಸಂಜೆ ವೇಳೆಗೆ 121.80 ಅಡಿಗೆ ಇಳಿದಿತ್ತು. ಸೋಮವಾರ ಬೆಳಿಗ್ಗೆಯಿಂದ 1.64 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿತ್ತು. ನಂತರ ಒಳ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಹೊರ ಹರಿವನ್ನು 50 ಸಾವಿರಕ್ಕೆ ಇಳಿಸಲಾಗಿತ್ತು. ಇದೀಗ ಒಳ ಹರಿವಿಗೆ ತಕ್ಕಂತೆ ಹೊರ ಹರಿವನ್ನು ತಗ್ಗಿಸಿದ್ದು ಮಂಗಳವಾರ 43,093 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.
2012 ರಿಂದ 2017ರವರೆಗೆ ಬರ ಬಂದಿದ್ದರಿಂದ ಜಲಾಶಯ ಭರ್ತಿಯಾಗಿರಲಿಲ್ಲ. ಕಳೆದ ವರ್ಷ ಜುಲೈ 15 ರಂದು ಕೆಆರ್ಎಸ್ ಭರ್ತಿಯಾಗಿತ್ತು. ಈ ಮೂಲಕ ದಶಕದ ಬಳಿಕ ಕೆಆರ್ಎಸ್ ಅವಧಿಗೂ ಮುನ್ನವೇ ಭರ್ತಿಯಾಗಿತ್ತು. ಈ ಹಿಂದೆ 2007ರಲ್ಲಿ ಕೆಆರ್ಎಸ್ ಜುಲೈ ತಿಂಗಳಿನಲ್ಲಿ ಭರ್ತಿಯಾಗಿತ್ತು.