ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ(Cauvery Catchment Area) ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಪ್ರಸಿದ್ಧ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಕಾವೇರಿಯ ನೀರಿನ ಮಟ್ಟ 100 ಅಡಿಗೆ ಏರಿಕೆಯಾಗಿ ‘ಶತಕ’ ಬಾರಿಸಿದೆ.
ಕಳೆದ ಮೂರೇ ದಿನಗಳ ಅಂತರದಲ್ಲಿ ಜಲಾಶಯದ(Dam) ನೀರಿನ ಮಟ್ಟದಲ್ಲಿ ಬರೋಬ್ಬರಿ 8 ಅಡಿ ಏರಿಕೆ ಕಂಡುಬಂದಿದ್ದು, ಪ್ರಸ್ತುತ ಡ್ಯಾಂನಲ್ಲಿ 23 ಟಿಎಂಸಿ ನೀರು ಸಂಗ್ರಹವಾಗಿದೆ. ಕಾವೇರಿ ಕೊಳ್ಳದಲ್ಲಿ ಮುಖ್ಯವಾಗಿ ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವುದರಿಂದ ಕೆಆರ್‌ಎಸ್‌ಗೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ – ಉಕ್ಕಡಗಾತ್ರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆ
ನೀರಿನ ಮಟ್ಟ ಎಷ್ಟಿದೆ?
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ಮಟ್ಟ : 100.34 ಅಡಿ
ಒಳಹರಿವು : 32,048 ಕ್ಯೂಸೆಕ್
ಹೊರಹರಿವು : 1,821 ಕ್ಯೂಸೆಕ್
ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
ಇಂದಿನ ಸಂಗ್ರಹ : 23.079 ಟಿಎಂಸಿ
ನದಿಯ ಮೇಲ್ಭಾಗದಲ್ಲಿ ಮಳೆ ಮುಂದುವರಿದಿರುವುದರಿಂದ ಜಲಾಶಯಕ್ಕೆ ಬರೋಬ್ಬರಿ 32,048 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಹೊರಹರಿವು ಕೇವಲ 1,821 ಕ್ಯೂಸೆಕ್ ಇದೆ. ಹೀಗಾಗಿ ಜಲಾಶಯದ ನೀರಿನ ಮಟ್ಟದಲ್ಲಿ ತೀವ್ರ ಏರಿಕೆ ಕಂಡುಬರುತ್ತಿದೆ. ಇದನ್ನೂ ಓದಿ: ಕೃಷ್ಣೆಯ ಅಬ್ಬರಕ್ಕೆ ಕುಡಚಿ ಸೇತುವೆ ಜಲಾವೃತ – ರಾಜ್ಯ ಹೆದ್ದಾರಿ ಬಂದ್, 50 ಕಿ.ಮೀ ಹೆಚ್ಚುವರಿ ಸುತ್ತಾಟ!
