– 1964-1999ರ ಕಡತ ಪರಿಶೀಲನೆ ಬಹುತೇಕ ಪೂರ್ಣ
ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ (KRS Road) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೆಸರು ಇಡುವ ವಿಚಾರ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ವಿವಾದಕ್ಕೆ ತೆರೆ ಎಳೆದಿದ್ದಾರೆ. 1999 ರಿಂದ 2024ರ ವರೆಗಿನ ಎಲ್ಲಾ ಕಡತಗಳನ್ನ ಪರಿಶೀಲಿಸಲಾಗಿದ್ದು, ಎಲ್ಲಿಯೂ ಪ್ರಿನ್ಸಸ್ ಹೆಸರು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನ ಕೆಆರ್‌ಎಸ್ ರಸ್ತೆಗೆ (Mysuru KRS Road) ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ನಿಯೋಗ ಸಭೆ ನಡೆಸಿತು. ಸಭೆಯಲ್ಲಿ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ ವಿಜಯ್ ಕುಮಾರ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಕೆ: ಈಶ್ವರ್ ಖಂಡ್ರೆ
ಈ ವೇಳೆ ಮಾತನಾಡಿದ ನಗರಪಾಲಿಕೆ ಆಯುಕ್ತರು, 1999 ರಿಂದ 2024ರ ವರೆಗಿನ ಎಲ್ಲಾ ಕಡತ ಪರಿಶೀಲನೆ ನಡೆಸಲಾಗಿದೆ. ಎಲ್ಲಿಯೂ ಪ್ರಿನ್ಸಸ್ ಹೆಸರು ಇಲ್ಲ. ಆ ರಸ್ತೆಗೆ ಯಾವ ಹೆಸರೂ ಇಲ್ಲ. ಈಗ 1964 ರಿಂದ 1999ರ ವರೆಗಿನ ಕಡತಗಳನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ಅದು ಕೂಡ ಬಹುತೇಕ ಮುಕ್ತಾಯವಾಗಿದೆ. ಇನ್ನೂ 20 ವರ್ಷಗಳ ಕಡತಗಳ ಪರಿಶೀಲನೆ ಮಾತ್ರ ಬಾಕಿ ಇದೆ. ಈಗ ಪರಿಶೀಲನೆ ಮಾಡಿರುವ ಕಡತಗಳಲ್ಲಿ ಎಲ್ಲಿಯೂ ಕೂಡ ಪ್ರೀನ್ಸಸ್ ಹೆಸರು ಪ್ರಸ್ತಾಪ ಆಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ.. ಸಚಿವ ಸಂಪುಟದಿಂದ ಕೈಬಿಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ
ಕೆಆರ್‌ಎಸ್ ರಸ್ತೆಗೆ ಅಧಿಕೃತವಾಗಿ ಯಾವ ಹೆಸರು ಇಲ್ಲ. ನಾವು ಮೈಸೂರು ಪಾಲಿಕೆಯ 9 ವಲಯಗಳ ಆಯುಕ್ತರಿಂದ ಮಾಹಿತಿ ಪಡೆದಿದ್ದೇನೆ. ಅವರು ಕೂಡ ಪ್ರಿನ್ಸಸ್ ಹೆಸರು ಇದೇ ಎಂಬುದಕ್ಕೆ ಯಾವ ಅಧಿಕೃತ ದಾಖಲೆ ಇಲ್ಲ ಎಂದು ಹೇಳಿದ್ದಾರೆ. ನಮ್ಮ ವ್ಯಾಪ್ತಿಯ ದಾಖಲೆ ಪರಿಶೀಲನೆ ಬಹುತೇಕ ಮುಕ್ತಾಯವಾಗಿದೆ. ಇನ್ನೂ ಗೆಜೆಟ್‌ನಲ್ಲಿ ಆ ಹೆಸರು ಇದಿಯೋ ಇಲ್ವೊ ಎಂಬುದು ನನಗೆ ಮಾಹಿತಿ ಇಲ್ಲ. ಆ ದಾಖಲೆ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಪಾಲಿಕೆಯ ಕೌನ್ಸಿಲ್ ವ್ಯಾಪ್ತಿಯಲ್ಲಿ ಪ್ರಿನ್ಸಸ್ ಹೆಸರಂತೂ ಇಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಕೆಆರ್‌ಎಸ್ ರಸ್ತೆಗೆ ಸಿಎಂ ಹೆಸರಿಡಬೇಕೆಂದು ಪರವಾಗಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಉಲ್ಟಾ ಹೊಡೆದಿದ್ದಾರೆ. ಕೆಆರ್‌ಎಸ್ ರಸ್ತೆಗೆ ಪ್ರಿನ್ಸಸ್ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಅನ್ನೋದಾದ್ರೇ ಆ ಹೆಸರು ಬದಲಾವಣೆ ಮಾಡುವುದು ಬೇಡ. ಇದಕ್ಕೆ ನನ್ನ ತಕರಾರು ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಹೊಸ ಲೋಕದಲ್ಲಿ ಶೋಕ ಕಾಣಬಹುದು – ವಿದೇಶ ಪ್ರವಾಸಕ್ಕೆ ಛಲವಾದಿ ವ್ಯಂಗ್ಯ