ಮಂಡ್ಯ/ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಕೊರತೆಯಾಗಿದೆ. ಆದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನ ಕರ್ನಾಟಕ ಚಾಚೂತಪ್ಪದೇ ಪಾಲನೆ ಮಾಡುತ್ತಿದೆ.
ಕಳೆದ ಮೂರು ದಿನಗಳಿಂದ ನಿತ್ಯ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಯುತ್ತಿದೆ. ಪರಿಣಾಮ ಕೆಆರ್‌ಎಸ್ ಜಲಾಶಯದಲ್ಲಿ (KRS Dam) ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಕುಸಿಯುತ್ತಿದ್ದು, 100 ಅಡಿಗೆ ಬಂದು ನಿಂತಿದೆ. ಇದು ಹಳೇ ಮೈಸೂರು (Old Mysuru) ಭಾಗದ ಜನತೆಯ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮಂಡ್ಯಗೆ ಬರಾಕ್ ಒಬಾಮಾ, ದಲೈಲಾಮಾ ಭೇಟಿ – ಹೆಲಿಪ್ಯಾಡ್, ಮೂಲಸೌಕರ್ಯಕ್ಕೆ ಸಿಎಂಗೆ ಮನವಿ
ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಬೆಳೆಗಳಿಗೆ ಮಾತ್ರವಲ್ಲ. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಮಂದಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ ಮೋದಿ
KRS ಡ್ಯಾಂ ನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 100.96 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 23.571 ಟಿಎಂಸಿ
ಒಳ ಹರಿವು – 1,610 ಕ್ಯೂಸೆಕ್
ಹೊರ ಹರಿವು – 7,329 ಕ್ಯೂಸೆಕ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]