ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ (Rain) ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್ (KRS) ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್‌ಎಸ್ ನೀರಿನ ಮಟ್ಟ (Water Level) 98 ಅಡಿಗೆ ತಲುಪಿದೆ.
ವಾರದ ಹಿಂದಷ್ಟೇ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದಾಗಿ ಕೆಆರ್‌ಎಸ್‌ಗೆ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದರೆ ಕೆಲವೇ ದಿನದಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ. ಸದ್ಯ ಡ್ಯಾಂನಲ್ಲಿ ಸುಮಾರು 21.987 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ
ಒಂದು ವಾರದಲ್ಲಿ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ದಿನೇ ದಿನೇ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಅಲ್ಲದೇ ಅನ್ನದಾತ ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ಮುಂದಿನ ಒಂದು ವಾರ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ
ಇಂದಿನ ಕೆಆರ್‌ಎಸ್ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 98.10 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ – 49.452 ಟಿಎಂಸಿ
ಇAದಿನ ಸಗ್ರಹ – 21.978 ಟಿಎಂಸಿ
ಒಳ ಹರಿವು – 14,135 ಕ್ಯೂಸೆಕ್
ಹೊರ ಹರಿವು – 532 ಕ್ಯೂಸೆಕ್