ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೃನಾಲ್ ಪಾಂಡ್ಯ (Krunal Pandya) ಅವರ ಪತ್ನಿ ಪಂಖುರಿ ಶರ್ಮಾ ಅವರಿಂದು ತಮ್ಮ 2ನೇ ಮಗುವಿಗೆ ಜನ್ಮನೀಡಿದ್ದಾರೆ. ಶುಭ ಶುಕ್ರವಾರವೇ ಗಂಡು ಮಗುವಿನ ಜನನವಾಗಿದ್ದು ದಂಪತಿಗಳಿಬ್ಬರು ಸಂಭ್ರಮದಲ್ಲಿದ್ದಾರೆ.
View this post on Instagram
ತಮ್ಮ ಪತ್ನಿ ಹಾಗೂ ಮಗುವಿನೊಂದಿಗೆ ತೆಗೆಸಿರುವ ಫೋಟೋವನ್ನು ಕೃನಾಲ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಗುವಿನ ಹೆಸರು ವಾಯು ಎಂದು ಸಹ ಪಾಂಡ್ಯ ಹೇಳಿಕೊಂಡಿದ್ದಾರೆ. ಈ ಫೋಟೋ ಕಂಡು ಪಾಂಡ್ಯ ಅಭಿಮಾನಿಗಳೂ ಶುಭ ಹಾರೈಸಿದ್ದಾರೆ. 2022ರ ಜುಲೈನಲ್ಲಿ ಕೃನಾಲ್ ಮತ್ತು ಪಂಖುರಿ (Pankuri Sharma) ದಂಪತಿ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಮೊದಲ ಮಗುವಿನ ಹೆಸರು ಕವಿರ್. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಮತ ಚಲಾಯಿಸಿದ ಟೀಂ ಇಂಡಿಯಾ ಮುಖ್ಯಕೋಚ್ – ಮತದಾನಕ್ಕೆ ಕರೆ ಕೊಟ್ಟ ಮಾಜಿ ಕ್ರಿಕೆಟರ್ಸ್!
2017ರಲ್ಲಿ ಕೃನಾಲ್ ಪಾಂಡ್ಯ ಅವರು ತಮ್ಮ ಬಹುಕಾಲದ ಗೆಳತಿ ಪಂಖುರಿ ಶರ್ಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ವೃತ್ತಿಯಲ್ಲಿ ಮಾಡೆಲ್ ಆಗಿದ್ದ ಪಂಖುರಿ, ತನಗೆ ಆಧಾರ ಸ್ತಂಭವಾಗಿ ನಿಂತಿದ್ದಾರೆ ಎಂದು ಕೃನಾಲ್ ಆಗಾಗ್ಗೆ ಹೇಳಿಕೊಂಡಿದ್ದಾರೆ.
ಸದ್ಯ ಐಪಿಎಲ್ ಕಣದಲ್ಲಿರುವ ಕೃನಾಲ್ ಪಾಂಡ್ಯ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು ನಗರ ಜಿಲ್ಲೆಯ 3 ಕ್ಷೇತ್ರಗಳ ಮತ ಎಣಿಕೆ ಮತ್ತು ಸ್ಟ್ರಾಂಗ್ ರೂಂ ಕೇಂದ್ರಗಳ ವಿವರ ಹೀಗಿದೆ..