– ಶ್ರೀರಾಮುಲುಗೆ ಅನ್ಯಾಯವಾಗಿದೆ ಎಂದು ಅಭಿಮಾನಿಗಳು ಕಿಡಿ
ಬೆಂಗಳೂರು: ಸಿಎಂ ಬಿಎಸ್‍ವೈ ನೇತೃತ್ವದ ಸರ್ಕಾರದ ಸಂಪುಟ ಖಾತೆ ಹಂಚಿಕೆ ಹಾಗೂ ಡಿಸಿಎಂ ಸ್ಥಾನಗಳ ಘೋಷಣೆಯಾಗುತ್ತಿದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಎಸ್ ಈಶ್ವರಪ್ಪ ಪರ ರಾಯಣ್ಣ ಬ್ರಿಗೇಡ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರೆ, ಶ್ರೀರಾಮುಲು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್, ಈಶ್ವರಪ್ಪರಿಗೆ ಡಿಸಿಎಂ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಭಾರೀ ಹೊಡೆತ ನೀಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಲ್ಲದೇ ಕೆಎಸ್ ಈಶ್ವರಪ್ಪ ಅವರನ್ನು ಕಡೆಗಣಿಸುವ ಮೂಲಕ ಹಿಂದುಳಿದ ವರ್ಗದವರಿಗೆ ಅಪಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
Advertisement
Advertisement
ಸಾಮಾಜಿ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಶ್ರೀರಾಮುಲು ಅಭಿಮಾನಿಗಳು, ಡಿಸಿಎಂ ಹುದ್ದೆ ಕೇಳಿದ್ದು ಶ್ರೀರಾಮುಲು ಒಬ್ಬರೇ. ಆದರೆ ಡಿಸಿಎಂ ಹುದ್ದೆ ಕೇಳದವರಿಗೆ ಆ ಸ್ಥಾನ ನೀಡಲಾಗಿದೆ. 80 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಶ್ರೀರಾಮುಲು ಪ್ರಚಾರ ಮಾಡಿದ್ದು, ವಾಲ್ಮೀಕಿ ಸಮುದಾಯಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡಲಾಗಿದೆ. ಈ ಜಾತಿ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ರಾಮುಲು ಅವರಿಗೆ ಡಿಸಿಎಂ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಅಭಿಮಾನಿಗಳು ಅಸಮಾಧಾನದ ವ್ಯಕ್ತಪಡಿಸಿದ ನಡುವೆಯೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ಸಂಪುಟ ಸಚಿವರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಬಿಎಸ್ ಯಡಿಯೂರಪ್ಪ ಅವರಿಗೆ, ನನ್ನ ಪಕ್ಷಕ್ಕೆ ಹಾಗೂ ಎಲ್ಲ ನಾಯಕರಿಗೆ ನಾನು ಅಭಾರಿಯಾಗಿರುತ್ತೇನೆ. ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ನಮ್ಮ ಕಾಯಕರ್ತರ ಹಾಗೂ ಜನತೆಯ ಆಶೀರ್ವಾದ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಸಂಪುಟ ಸಚಿವನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಟ್ಟ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರಿಗೆ, ನನ್ನ ಪಕ್ಷಕ್ಕೆ ಹಾಗು ಎಲ್ಲ ನಾಯಕರಿಗೆ ನಾನು ಆಭಾರಿಯಾಗಿದ್ದೇನೆ . ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ನಮ್ಮ ಕಾರ್ಯಕರ್ತರ ಹಾಗು ಜನತೆಯ ಆಶೀರ್ವಾದ ಕೋರುತ್ತೇನೆ.
— B Sriramulu (@sriramulubjp) August 26, 2019