ಬೆಂಗಳೂರು: ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಸ್ಕೀಂ ಕೊಡಲ್ಲ ಎಂಬ ಡಿಕೆಶಿ ಹೇಳಿಕೆಗೆ ಬಿಜೆಪಿ (BJP) ಹಿರಿಯ ನಾಯಕ ಕೆಎಸ್ ಈಶ್ವರಪ್ಪ (K.S.Eshwarappa) ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಮುಂಚೆ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (D.K.Shivakumar) ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿ (Guarantee) ಜಾರಿಯ ಭರವಸೆ ಕೊಟ್ಟಿದ್ದರು. ಜಾರಿಗೆ ತರುವುದು ಬಿಡುವುದು ಮತ್ತಿನ ವಿಚಾರ. ಆದರೆ ಈಗ ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ವಿರುದ್ದ ಟೀಕೆ – ಪೋಸ್ಟ್ ಹಂಚಿಕೊಂಡಿದ್ದ ಶಿಕ್ಷಕ ಅಮಾನತು
ಸಿದ್ದರಾಮಯ್ಯ ಮತ್ತು ಡಿಕೆಶಿ ಮತದಾರರ ಕಾಲಿಗೆ ಬಿದ್ದು ಮತ ಪಡೆದು ಸಿಎಂ ಹಾಗೂ ಡಿಸಿಎಂ ಆಗಿದ್ದಾರೆ. ಈಗ ಅದೇ ಜನರಿಗೆ ಹಾದಿ ಬೀದಿಯಲ್ಲಿ ಹೋಗುವವರು ಎನ್ನುವುದು ಸರಿಯಲ್ಲ. ಮತ್ತೆ ಅದೇ ಜನರ ಎದುರು ಲೋಕಸಭಾ ಚುನಾವಣೆಗೆ ಮತ ಕೇಳಲು ಹೋಗಬೇಕು. ಆಗ ಹಾದಿ ಬೀದಿಯಲ್ಲಿ ಹೋಗುವವರ ಬಳಿ ಮತ ಕೇಳಬೇಡಿ ಎಂದು ಇವರಿಬ್ಬರಿಗೆ ಛೀಮಾರಿ ಹಾಕಿ ಮನೆಗೆ ಕಳುಹಿಸುತ್ತಾರೆ. ಚುನಾವಣೆಗೂ ಮೊದಲು ಎಲ್ಲರಿಗೂ ಉಚಿತ ಎಂದು ಭರವಸೆ ಕೊಟ್ಟರು. ಅದರೆ ಈಗ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವ ರೀತಿ ಸರಿಯಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: 2 ಸಾವಿರ ರೂ. ನೋಟು ಮೋದಿಗೆ ಇಷ್ಟವಿರಲಿಲ್ಲ – ಸಭೆಯ ಮಾಹಿತಿ ರಿವೀಲ್ ಮಾಡಿದ ನೃಪೇಂದ್ರ ಮಿಶ್ರಾ
ಕಾಂಗ್ರೆಸ್ ಪಕ್ಷ ರಾಜ್ಯದ ಮತದಾರರಿಗೆ ಅವಮಾನ ಮಾಡಿದೆ. ಸಿಎಂ ಮತ್ತು ಡಿಸಿಎಂ ಇಬ್ಬರೂ ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ರಾಜ್ಯದ ಜನ ಹಾದಿ ಬೀದಿಯಲ್ಲಿ ಹೋಗುವವರಲ್ಲಾ. ಜನ ನಿಮ್ಮ ಕಾಲಿಗೆ ಬಿದ್ದು ಮತಕೊಡುತ್ತೇವೆ ಎಂದು ಹೇಳಿಲ್ಲ. ನೀವೇ ಜನರ ಕಾಲಿಗೆ ಬಿದ್ದು ಮತ ಕೊಡಿ ಎಂದು ಕೇಳಿದ್ದು. ಈಗ ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲಾ ಗ್ಯಾರಂಟಿ ಕೊಡಲ್ಲ ಎನ್ನುತ್ತಿದ್ದೀರಿ. ತಕ್ಷಣವೇ ನೀವು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ತಡವಾಗಿ ಬಂದ ಸಹಾಯಕ ಆಯುಕ್ತ – ಸಭೆಯಿಂದಲೇ ಹೊರಕಳುಹಿಸಿದ ರಾಯಚೂರು ಡಿಸಿ
ಜನರಿಗೆ ಮೋಸ ಮಾಡಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದೆ. ಮೊದಲ ಕ್ಯಾಬಿನೆಟ್ ಅಲ್ಲಿ ಗ್ಯಾರಂಟಿ ಜಾರಿಗೆ ತರದಿರುವುದು ಜನರಿಗೆ ಮಾಡಿದ ದ್ರೋಹ. ಕಾಂಗ್ರೆಸ್ ನಾಯಕರಿಗೆ ಭರವಸೆ ಕೊಡುವಾಗ ಮೈಮೇಲೆ ಪ್ರಜ್ಞೆ ಇರಲಿಲ್ವಾ? ಕಾಂಗ್ರೆಸ್ ಜನರಿಗೆ ಮೋಸ ಮಾಡಿದ ಬಗ್ಗೆ, ಹಾದಿ ಬೀದಿಯಲ್ಲಿ ಹೋಗುವವರಿಗೆ ಗ್ಯಾರಂಟಿ ಇಲ್ಲ ಎಂದು ಹೇಳಿದ ಬಗ್ಗೆ ಹೋರಾಟ ಮಾಡುತ್ತೇವೆ. ರಾಜ್ಯಾಧ್ಯಕ್ಷರ ಜೊತೆ ಚರ್ಚೆ ಮಾಡಿ ಹೋರಾಟದ ರೂಪುರೇಷೆ ಮಾಡುತ್ತೇನೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಗ್ಯಾರಂಟಿ ಜಾರಿ ಯಾವಾಗ? – ಗೊಂದಲದಲ್ಲಿ ಮತದಾರ, ಬಿಲ್ ಕಟ್ಟಿ ಎನ್ನುತ್ತಿದೆ ಬೆಸ್ಕಾಂ