ಚಿಕ್ಕೋಡಿ: ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕ ಗಾಂಧಿ ಪ್ರವೇಶ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ, ತಾತ, ಅಜ್ಜ, ಅಜ್ಜಿ, ಅಮ್ಮ, ಅಪ್ಪ, ಅಣ್ಣನ ಕೈಯಲ್ಲೇ ಏನು ಮಾಡಲು ಆಗಲಿಲ್ಲ. ಇನ್ನು ಈ ಪ್ರಿಯಾಂಕಾ ಗಾಂಧಿ ಅವರು ಬಂದು ಏನು ಮಾಡುತ್ತಾರೆ ಎಂದು ವ್ಯಂಗವಾಡಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣಕ್ಕೆ ಆಗಮಿಸಿದ್ದ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ, ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ಮಾಧ್ಯಮಗಳನ್ನು ಟೆರೆರಿಸ್ಟ್‍ಗಳಗೆ ಹೋಲಿಸಿದ ಪ್ರಿಯಾಂಕ್ ಖರ್ಗೆ ಅವರಿಗೆ ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲ. ಅಂತವರನ್ನು ಕಾಂಗ್ರೆಸ್ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿದೆ. ಹೀಗಾಗಿ ಕಾಂಗ್ರೆಸ್ ಇಂದು ಯಾವ ಮಟ್ಟಕ್ಕೆ ಬಂದಿದೆ ಎನ್ನುವುದು ಗೊತ್ತಾಗುತ್ತೆ ಎಂದರು.
Advertisement
Advertisement
ರಾಜೀನಾಮೆ ಕೊಡಿ:
ಆಪರೇಷನ್ ಕಮಲದಲ್ಲಿ ಒಬ್ಬ ಶಾಸಕನಿಗೆ ಬಿಜೆಪಿಯಿಂದ ಭಾರೀ ಮೊತ್ತದ ಹಣದ ಆಮಿಷ ಒಡ್ಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಆದರೆ ಅವರು ಆ ಶಾಸಕ ಯಾರು ಅಂತ ಹೇಳಿಲ್ಲ. ಆ ಶಾಸಕ ಯಾರು ಅಂತ ಮೊದಲು ಕುಮಾರಸ್ವಾಮಿ ಹೇಳಲಿ ಎಂದು ಸವಾಲು ಎಸೆದರು. ಇದೇ ವೇಳೆ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಈಶ್ವರಪ್ಪ ಅವರು, ಸಿದ್ದರಾಮಯ್ಯ ಅವರು ಶಾಸಕರನ್ನು ರೆಸಾರ್ಟಿಗೆ ಕರೆದುಕೊಂಡು ಹೋಗುತ್ತಾರೆ. ಆದರೆ ಅಲ್ಲಿ ಶಾಸಕರು ರೌಡಿಗಳ ಹಾಗೆ ಕುಡಿದು ಬಡಿದಾಡಿಕೊಳ್ಳುತ್ತಾರೆ. ಸಿದ್ದರಾಮಯ್ಯನವರು ಈಗೇನು ಹೇಳ್ತಾರೆ. ಕಾಂಗ್ರೆಸ್ ಮುಖಂಡರಿಗೆ ನಾಚಿಕೆ, ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ನಿಜಕ್ಕೂ ಸಿದ್ದರಾಮಯ್ಯನವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರೆ ಮೊದಲು ರಾಜೀನಾಮೆ ಕೊಟ್ಟು ಹೊರ ಬರಲಿ ಎಂದು ಆಗ್ರಹಿಸಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv