ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕೃತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ ಎಲ್ಲರೂ ಈ ಬಗ್ಗೆ ಅಧ್ಯಯನ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಚಾರಗಳು, ನಮ್ಮ ನಾಡಿನ ಸಂಸ್ಕೃತಿ ಜೊತೆಗೆ ತಾಂತ್ರಿಕತೆಗೆ ಒತ್ತು ನೀಡುವ ಶಿಕ್ಷಣ ನೀತಿ ಇದಾಗಿದೆ. ಪರ ವಿರೋಧ ಎಲ್ಲೆಡೆ ಇರುತ್ತದೆ. ಆದರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ಶಿಕ್ಷಣ ನೀತಿಯನ್ನು ಎಲ್ಲರೂ ತಿಳಿದು ಅನುಷ್ಠಾನಗೊಳಿಸಬೇಕು ಎಂದರು. ಇದನ್ನೂ ಓದಿ: ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ: ಸುಮಲತಾ
Advertisement
Advertisement
ಲೋಕೋಪಯೋಗಿ ಸಚಿವ ಸಿ.ಸಿ.ಪಾಟಿಲ್ ಮಾತನಾಡಿ, ಮನುಷ್ಯನನ್ನು ಒಂದು ವ್ಯಕ್ತಿ ಮತ್ತು ಶಕ್ತಿಯನ್ನಾಗಿ ರೂಪಿಸುವ ಸಾಮಥ್ರ್ಯ ಕೇವಲ ಶಿಕ್ಷಕರಿಗಿದ್ದು, ನಮ್ಮ ಸಂಸ್ಕೃತಿಯಲ್ಲಿ ತಾಯಿ-ತಂದೆ ನಂತರದ ಸ್ಥಾನ ಶಿಕ್ಷಕರು ತುಂಬುತ್ತಾರೆ. ಎಲ್ಲಾ ಮಕ್ಕಳಿಗೆ ಮೌಲ್ಯಾಧಾರಿತ ಮತ್ತು ಸರ್ವತೋಮುಖ ಬೆಳವಣಿಗೆ ಆಗುವಂತಹ ಶಿಕ್ಷಣ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್ ಸಂಕಷ್ಟದಲ್ಲಿ ಅನೇಕ ಶಿಕ್ಷಕರು ತಮ್ಮ ಜೀವದ ಹಂಗು ತೊರೆದು ಯೋಧರಂತೆ ಸೇವೆ ಸಲ್ಲಿಸಿರುವುದು ಶ್ಲಾಘನೀಯವಾಗಿದ್ದು, ಕೋವಿಡ್‍ನಿಂದ ಮೃತ ಹೊಂದಿದ ಶಿಕ್ಷಕರ ಪರವಾಗಿ ಸರ್ಕಾರ ಇದೆ. ತುಂಬ ಕಾಲ ಶಾಲೆಯಿಂದ ಮಕ್ಕಳು ಹೊರಗುಳಿಯುವುದು ರಾಷ್ಟ್ರೀಯ ಹಿತದೃಷ್ಟಿಯಿಂದ ಒಳ್ಳೆಯದಲ್ಲವೆಂದು ಸರ್ಕಾರ ಶಾಲೆ ಆರಂಭಿಸುವ ನಿರ್ಧಾರ ಮಾಡಿ ಶಾಲೆ ಆರಂಭಿಸಿದ್ದು, ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದರು. ಇದನ್ನೂ ಓದಿ: ಕುರಿಗಾರರ ಜೊತೆಗೆ ಕುಳಿತು ಊಟ ಮಾಡಿದ ನಟ ಪುನೀತ್
Advertisement
Advertisement
ಇದೇ ವೇಳೆ 2021 ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.