ಸಿದ್ದು, ಡಿಕೆಶಿಯನ್ನು ತೆಗಳಿ, ಖರ್ಗೆ, ಹರಿಪ್ರಸಾದ್‌ರನ್ನು ಹೊಗಳಿದ ಈಶ್ವರಪ್ಪ

2 Min Read

ಮೈಸೂರು: ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಸೇರಿ ಕಾಂಗ್ರೆಸ್‍ಗೆ ಜಾತಿಯ ಕೆಸರು ಅಂಟಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ

ಇಂದು ಆಷಾಢ ಮಾಸದ ಕೊನೆಯ ಶುಕ್ರವಾರ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತಸಾಗರ ಹರಿದು ಬರುತ್ತಿದೆ. ಈ ನಡುವೆ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಸೇರಿ ಕಾಂಗ್ರೆಸ್‍ಗೆ ಜಾತಿ ಪಟ್ಟ ಅಂಟಿಸಿದ್ದಾರೆ. ಡಿ.ಕೆ.ಶಿವಕುಮಾರ್ ಒಬ್ಬ ಒಳ್ಳೆಯ ನಾಯಕ ಅಂದುಕೊಂಡಿದೆ. ತಾನು ಸಿಎಂ ಆಗಲು ತನ್ನ ಸಮುದಾಯ ತನ್ನ ಬೆನ್ನಿಗೆ ಬರಬೇಕು ಎಂದು ಹೇಳುವ ಮೂಲಕ ಡಿಕೆಶಿ ಜಾತಿವಾದಿ ಆಗಿದ್ದಾರೆ. ಸಿದ್ದರಾಮಯ್ಯ ಕುರುಬರ ನಾಯಕ ಎಂದು ಹೇಳುವ ಮೂಲಕ ಅವರು ಸಹ ಜಾತಿವಾದಿಯಾಗಿದ್ದಾರೆ. ಇವರಿಬ್ಬರು ಸೇರಿ ಕಾಂಗ್ರೆಸ್‍ಗೆ ಜಾತಿಯ ಕೆಸರು ಅಂಟಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಹರಿಪ್ರಸಾದ್ ಈ ವಿಚಾರದಲ್ಲಿನ ಹೇಳಿಕೆಗಳಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.. ಅವರಿಬ್ಬರು ಮಾತ್ರ ಕಾಂಗ್ರೆಸ್ ಗೌರವ ತರುವ ಮಾತನಾಡಿದ್ದಾರೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಈ ಏರಿಯಾದಲ್ಲಿ ಗಂಡಿಗೆ ಹೆಣ್ಣು, ಹೆಣ್ಣಿಗೆ ಗಂಡು ಸಿಕ್ತಿಲ್ಲ

ಮೂರು ತಲೆಮಾರಿಗೆ ಆಗುವಷ್ಟು ಹಣ ಸಂಪಾದಿಸಿದ್ದೇವೆ ಎಂಬ ರಮೇಶ್ ಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಭ್ರಷ್ಟತನ ಬಯಲಾಗಿದೆ. ರಮೇಶ್ ಕುಮಾರ್ ಸತ್ಯವನ್ನೇ ಹೇಳಿದ್ದಾರೆ. ಇಂತಹ ಕಾಂಗ್ರೆಸ್ ನಮ್ಮ ಸರ್ಕಾರ ಮೇಲೆ 40% ಲಂಚದ ಆರೋಪ ಮಾಡುತ್ತದೆ. ನಮ್ಮ ಸರ್ಕಾರದ ಯಾವ ಸಚಿವರು ಮೇಲೂ ಒಂದೇ ಒಂದು ಲಂಚದ ನಿರ್ದಿಷ್ಟ ಪ್ರಕರಣ ಇಲ್ಲ. 40% ಆರೋಪ ಮಾಡುವ ಕಾಂಗ್ರೆಸ್ ಒಂದೇ ಒಂದು ಕೇಸ್ ಎತ್ತಿ ತೋರಿಸಲಿ. ಯಾರೋ ಹೇಳಿದ ಹೇಳಿಕೆ ಹಿಡಿದುಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜಕೀಯ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಬಿ ರಿಪೋರ್ಟ್ ವಿಚಾರವಾಗಿ ಮಾತನಾಡಿದ ಅವರು, ನನಗೆ ಮೊದಲ ದಿನವೇ ಈ ಪ್ರಕರಣದಿಂದ ಆರೋಪ ಮುಕ್ತನಾಗಿ ಬರುತ್ತೇನೆಂದು ಗೊತ್ತಿತ್ತು. ನಾನು ಈ ಪ್ರಕರಣದಲ್ಲಿ ಯಾವ ತಪ್ಪು ಮಾಡಿಲ್ಲ. ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ಕೊಟ್ಟಿದೆ. ತನಿಖೆ ಮೂಲಕ ಈಗ ಸಂಪೂರ್ಣ ಆರೋಪ ಮುಕ್ತನಾಗಿದ್ದೇನೆ. ಪ್ರಕರಣದಿಂದ ಪಕ್ಷಕ್ಕೆ ಇದ್ದ ಮುಜುಗರ ನಿವಾರಣೆಯಾಗಿದೆ. ಬಿ ರಿಪೋರ್ಟ್ ಆದರೂ ಕಾಂಗ್ರೆಸ್ ಈ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿರುವುದು ಬೇಸರ ತರಿಸಿದೆ. ಸಿಎಂ ಆಗಿದ್ದ ಸಿದ್ದರಾಮಯ್ಯನವರಿಗೆ ಪ್ರಕರಣದ ತನಿಖೆಗಳು ಹೇಗೆ ನಡೆಯುತ್ತದೆ ಎಂದು ಗೊತ್ತಿದ್ದರು ಬಿ ರಿಪೋರ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದು ಬೇಸರ ಮೂಡಿಸಿದೆ. ಸಿದ್ದರಾಮಯ್ಯ ಕಾನೂನು ಪಂಡಿತರ ಆಗಿದ್ದಾರೆ. ಸುಮ್ಮನೆ ಪ್ರಕರಣದ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *