ಶಿವಮೊಗ್ಗ: ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಕಿಂಚಿತ್ತು ಮಾನ ಮರ್ಯಾದೆ ಇದ್ದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ಇಲ್ಲದಿದ್ದರೆ ಸಿದ್ದರಾಮಯ್ಯ (Siddaramaiah) ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಸವಾಲು ಹಾಕಿದರು.
ಶಿವಮೊಗ್ಗದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರ ವಿರುದ್ಧ ಕಿಡಿಕಾರಿದರು. ದೇಶದ ರಾಜಕೀಯ ವ್ಯವಸ್ಥೆಯಲ್ಲಿ ವಿವಿಧ ಸ್ಥರಗಳ ಅಧಿಕಾರ ಹೊಂದಿರುವವರು ಅವರವರ ಇತಿಮಿತಿಗಳಲ್ಲಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
Advertisement
Advertisement
ಕೊಪ್ಪಳದಲ್ಲಿ (Koppala) ವಿಪಕ್ಷ ನಾಯಕ ಸಿದ್ದರಾಮಯ್ಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ತಪ್ಪು. ಪಕ್ಷದ ಚುನಾವಣಾ ಸಮಿತಿ ಆಯ್ಕೆ ಮಾಡಿ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ. ಸಿದ್ದರಾಮಯ್ಯ 224 ಕ್ಷೇತ್ರಗಳಲ್ಲೂ ಕೂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿ. ನಿಮ್ಮ ಬೆಂಬಲಿಗರು ಮಾತ್ರ ಅಭ್ಯರ್ಥಿಗಳಾಗಿ ಘೋಷಣೆ ಆಗಬೇಕಾ? ಎಂದು ಕಿಡಿಕಾರಿದರು. ಇದನ್ನೂ ಓದಿ: ಗಡಿ ಹೋರಾಟದಲ್ಲಿ ಗಲಭೆ ಸೃಷ್ಟಿಸಿದವರು ಸ್ವಾತಂತ್ರ್ಯ ಹೋರಾಟಗಾರರೆಂದ ಏಕನಾಥ್ ಶಿಂಧೆ ವಿರುದ್ಧ ಕನ್ನಡಿಗರ ಆಕ್ರೋಶ
Advertisement
ಡಿ.ಕೆ. ಶಿವಕುಮಾರ್ ಅವರಿಗೆ ಕಿಂಚಿತ್ತು ಮಾನ ಮರ್ಯಾದೆ ಇದ್ದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ಇಲ್ಲದಿದ್ದರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ವಿಪಕ್ಷ ನಾಯಕನಿಗೆ ವಿಶೇಷ ಸ್ಥಾನಮಾನ ಏನಾದರೂ ಕೊಟ್ಟಿದ್ದೀರಾ? ಸತೀಶ್ ಜಾರಕಿಹೊಳಿ (Satish Jarkiholi) ಸೇರಿದಂತೆ ಕಾರ್ಯಾಧ್ಯಕ್ಷ ಹುದ್ದೆ ಹೊಂದಿರುವ ಎಲ್ಲರೂ ಐದು ಹತ್ತು ಸೀಟು ಅನೌನ್ಸ್ ಮಾಡಲಿ ಎಂದು ಸವಾಲೆಸೆದರು.
Advertisement
ಅರ್ಜಿ ಹಾಕುವ ಸಂದರ್ಭ ಇನ್ನು ಮುಗಿಯುವ ಮೊದಲೇ ಟಿಕೆಟ್ ಘೋಷಣೆ ಮಾಡಿದ್ದಾರೆ. ಇದು ಒಂದು ರೀತಿಯ ರಾಜಕೀಯ ವ್ಯಭಿಚಾರ, ಬಿಜೆಪಿ ಪಕ್ಷ ಕಾಂಗ್ರೆಸ್ ವ್ಯವಸ್ಥೆಯಿಂದ ಬೆಳೆದಿಲ್ಲ. ರಾಷ್ಟ್ರೀಯ ವಿಚಾರಧಾರೆಗಳನ್ನು ಇಟ್ಟುಕೊಂಡು ಬೆಳೆದಿದೆ ಎಂದರು. ಇದನ್ನೂ ಓದಿ: ಶ್ರದ್ಧಾ ಕೊಲೆ ಆಕಸ್ಮಿಕ, ಇದರಲ್ಲಿ ಹೊಸದೇನಿಲ್ಲ- ಅಶೋಕ್ ಗೆಹ್ಲೋಟ್ ವಿವಾದಿತ ಹೇಳಿಕೆಗೆ ಬಿಜೆಪಿ ಕಿಡಿ