ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಈಶ್ವರಪ್ಪ ಸೆಡ್ಡುಹೊಡೆಯಲು ಮತ್ತೆ ಮುಂದಾಗಿದ್ದಾರಾ ಹೀಗೊಂದು ಪ್ರಶ್ನೆ ಈಗ ಮತ್ತೊಮ್ಮೆ ಎದ್ದಿದೆ.
ಈಶ್ವರಪ್ಪ ಅವರು ಇಂದು ದಿಢೀರ್ ಎಂಬಂತೆ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಸೊಗಡು ಶಿವಣ್ಣ ಅವರನ್ನು ಭೇಟಿ ಮಾಡಿ ರಹಸ್ಯ ಸಭೆ ನಡೆಸಿದ ಕಾರಣ ಈ ಪ್ರಶ್ನೆ ಈಗ ಎದ್ದಿದೆ.
Advertisement
ತುಮಕೂರು ಹೊರವಲಯದಲ್ಲಿರುವ ಸೊಗಡು ನಿವಾಸದಲ್ಲಿ ಈಶ್ವರಪ್ಪ ಅವರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮುಂದಿನ ರಾಜಕೀಯ ನಡೆ ಮತ್ತು ರಾಯಣ್ಣ ಬ್ರಿಗೇಡ್ ವಿಸ್ತರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
ಸಭೆ ಮುಗಿದ ಬಳಿಕ ಈಗ ಬಂದೆ ಎಂದು ಹೇಳಿ ಮಾಧ್ಯಮಗಳ ಕಣ್ಣುತಪ್ಪಿಸಿ ಹಿಂದಿನ ಬಾಗಿಲಿನಿಂದ ಈಶ್ವರಪ್ಪ ತೆರಳಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ರವೀಂದ್ರನಾಥ್, ಭಾನುಪ್ರಕಾಶ್, ಸೋಮಣ್ಣ ಬೇವಿನಮರದ, ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಸೊಗಡು ಶಿವಣ್ಣ, ಇಷ್ಟು ದಿನ ಕಳೆದರೂ ಕೂಡ ಇನ್ನೂ ಕೆಲ ಜಿಲ್ಲೆಗಳಲ್ಲಿ ಅಧ್ಯಕ್ಷರ ಬದಲಾವಣೆಯಾಗದಿದ್ದಕ್ಕೆ ಮತ್ತೊಮ್ಮೆ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುವ ಬಗ್ಗೆ ಚರ್ಚಿಸಲಾಯಿತು. ಇದರ ಜೊತೆ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
Advertisement
ಈ ಬಗ್ಗೆ 27 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಿದ್ದಾರೆ. ಸಮಾವೇಶದಲ್ಲಿ ಬ್ರಿಗೇಡ್ ನ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಹೇಳಿದರು.