ಶಿವಮೊಗ್ಗ: ಕಾಂಗ್ರೆಸ್‍ನವರು ಹಾನಗಲ್‍ನಲ್ಲಿ ಕೇವಲ 7 ಸಾವಿರ ಮತಗಳ ಅಂತರದಲ್ಲಿ ಗೆದ್ದಿರೋದಕ್ಕೆ ಬಹಳ ಹಾರಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಾನಗಲ್ ಸೇರಿದಂತೆ ಇತರೆ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಡ್ಡಿ ಸಮೇತ ವಸೂಲಿ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಂದಗಿಯಲ್ಲಿ ನಾವು 31 ಸಾವಿರ ಅಂತರದಲ್ಲಿ ಗೆದ್ದಿದ್ದೇವೆ. ಆದರೆ ಅದೇ ಕಾಂಗ್ರೆಸ್‍ನವರು ಏನು ಮಾತನಾಡುತ್ತಿಲ್ಲ. ಈ ಬಗ್ಗೆ ಮಾತನಾಡಲು ಅವರಿಗೆ ಬಾಯಿಯೇ ಬರುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ನಡೆದ ಕಾರ್ಪೋರೇಷನ್ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನ ಪಡೆದೆವು. ಅದಕ್ಕಿಂತ ಮೊದಲು ನಡೆದ 17 ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದೆವು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ 25 ಸ್ಥಾನ ಗಳಿಸಿದೇವು. ಆಗೆಲ್ಲಾ ಬಾಯಿ ಮುಚ್ಚಿಕೊಂಡು ಇದ್ದಂತಹ ಸಿದ್ದರಾಮಯ್ಯ ಅವರು ಹಾನಗಲ್‍ನಲ್ಲಿ ಗೆದ್ದಿದ್ದಕ್ಕೆ ಬಾರಿ ಹಾರಾಡುತ್ತಿದ್ದಾರೆ. ರಾಜ್ಯದ ವಿಧಾನಸಭೆಗೆ ಯಾವಾಗ ಚುನಾವಣೆ ಎದುರಾದರೂ ಅತಿ ಹೆಚ್ಚು ಸ್ಥಾನ ಗಳಿಸಿ ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂಬ ವಿಶ್ವಾಸವನ್ನು ಸಚಿವ ಈಶ್ವರಪ್ಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಲಿತರ ಬಗ್ಗೆ ಮಾತನಾಡಿದ್ರೆ ಮುಂದಿನ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕಾಗುತ್ತೆ: ಮುನಿಸ್ವಾಮಿ