ಬೆಂಗಳೂರು: ಗುತ್ತಿಗೆದಾರ ಸಂತೋಷ್ ಅವರೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಡಿ.ಕೆ ಸುರೇಶ್, ಹನುಮಂತಯ್ಯ ಅವರನ್ನು ಸಂತೋಷ್ ಭೇಟಿ ಮಾಡಿ ಸುದ್ದಿಗೋಷ್ಠಿ ನಡೆಸಿದ್ದರು. ಆ ಕಾಪಿಯನ್ನು ನಾನು ತೆಗೆದುಕೊಂಡು ಗುತ್ತಿಗೆದಾರ ಸಂತೋಷ್ ವಿರುದ್ಧ ಕೋರ್ಟ್‍ನಲ್ಲಿ ಮಾನನಷ್ಟ ಕೇಸ್ ಹಾಕಿದ್ದೇನೆ ಎಂದರು.
Advertisement
Advertisement
ಕೋರ್ಟ್‍ನಿಂದ ನೋಟಿಸ್ ಹೋದ ನಂತರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಟಿಸ್ ಹೋದ ನಂತರ ಗಾಬರಿಯಾಗಿದ್ದಾರೆ ಅನಿಸುತ್ತೆ. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Advertisement
Advertisement
40 ಪರ್ಸೆಂಟ್ ಕಮಿಷನ್ ಕುರಿತು ಗುತ್ತಿಗೆದಾರ ಸಂತೋಷ್ ನನ್ನ ಬಗ್ಗೆಯೂ ಅಲ್ಲ, ನಮ್ಮ ಕಡೆ ಅವರು ಯಾರೋ ಕೇಳುತ್ತಿದ್ದಾರೆ ಎಂದು ಪತ್ರ ಬರೆದಿದ್ದಾರೆ. ಇದರಿಂದಾಗಿ ನಾನು ಕಾನೂನುಬದ್ಧವಾಗಿ ಪ್ರಜಾಪ್ರಭುತ್ವದಲ್ಲಿ ಏನು ವ್ಯವಸ್ಥೆ ಇದೆಯೋ ಅದನ್ನು ನಾನು ಮಾಡಿದ್ದೇನೆ. ಸುಮ್‍ಸುಮ್ಮನೆ ಯಾವುದೇ ರಾಜಕಾರಣಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಪತ್ರಗಳನ್ನು ಬರೆದರೆ ಸಹಿಸಲು ಸಾಧ್ಯವಿಲ್ಲ. ಇದರಿಂದಾಗಿ ನಾನು ಕೋರ್ಟ್‍ಗೆ ಹೋಗಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ, ಭಜರಂಗದಳ, ಪಿಎಫ್‍ಐ, ಸಿಎಫ್‍ಐ ಸೇರ್ಕೊಂಡು ಸಿಎಂ ಸಾಮರಸ್ಯ ಹಾಳು ಮಾಡ್ತಿದ್ದಾರೆ: ಸುರ್ಜೆವಾಲ
ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಪರ್ಸೆಂಟ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.