ಕಾರವಾರ: ಮಸೀದಿ, ದೇವಸ್ಥಾನ, ಚರ್ಚ್‍ಗಳಲ್ಲಿ ಜೋರಾಗಿ ಮೈಕ್ ಹಾಕಲಾರಂಭಿಸಿದ್ರೆ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಳಲೆ ಗ್ರಾಮದ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಕುರಿತು ಮಾತನಾಡಿದ ಅವರು, ಅಮಿತ್ ಶಾ ಅವರು ರಾಜ್ಯ ಪ್ರವಾಸದ ಬಳಿಕ ಸಚಿವ ಸಂಪುಟದಲ್ಲಿ ಬದಲಾವಣೆ ಜೊತೆಗೆ, ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಇದನ್ನು ಕಾದು ನೋಡಿ. ಅವರು ಇಲ್ಲಿಗೆ ಬರಬೇಕಿದ್ದರೆ ರಾಷ್ಟ್ರದ್ರೋಹಿಗಳ ವಿರುದ್ಧ ಬಾಂಬ್ ತೆಗೆದುಕೊಂಡೆ ಬಂದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು. ಇದನ್ನೂ ಓದಿ: ರಾಜ್ ಠಾಕ್ರೆ ಮನೆಗೆ ಭೇಟಿ ನೀಡಿದ ನಿತಿನ್ ಗಡ್ಕರಿ – ಉದ್ದೇಶವೇನು?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ಕಾಲಿಟ್ಟ ಕಡೆ ಕಾಂಗ್ರೆಸ್ ಸರ್ವ ನಾಶವಾಗಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದ್ರು ಅದೇ ಗತಿ. ಅವರು ಮುಂದೆ ರಾಜ್ಯ ಪ್ರವಾಸ ಬರ್ತಾರೆ ಎಂದಾದರೇ ರಾಹುಲ್ ಗಾಂಧಿ ಹೋಗಿ ಬರುವ ಖರ್ಚು ತಾನುವಹಿಸಿಕೊಳ್ಳುತ್ತೇನೆ ಎಂದು ಹೇಳಿದರು.
ಮಸೀದಿಗಳಲ್ಲಿ ಧ್ವನಿವರ್ಧಕ ಬ್ಯಾನ್ ಮಾಡುವಂತೆ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಹೇಳಿಕೆ ವಿಚಾರ ವಾಗಿ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಸಮಾಜವನ್ನು ಒಪ್ಪಿಸಿ ಮಾಡಬೇಕಿದೆ. ಓದುವಂತಹ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗ್ತಿದೆ ಅನ್ನೋ ವಿಷಯ ಬಹಳ ಹಿಂದಿನಿಂದಲೂ ಕೇಳಿ ಬರ್ತಿದೆ. ಮುಂಚೆಯಿಂದಲೂ ಬಂದಂತಹ ಪದ್ಧತಿಯ ಮೂಲಕ ದೇವರ ಪ್ರಾರ್ಥನೆ ಮಾಡ್ತೇವೆ ಅಂತಾರೆ. ಆದರೆ, ಇದರಿಂದ ಅವರ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ಮಸೀದಿಗಳಲ್ಲಿ ಜೋರಾಗಿ ಕೂಗ್ತಾರೆ, ಅದಕ್ಕೆ ಹನುಮಾನ್ ಚಾಲೀಸ ಮೈಕಿನಲ್ಲಿ ಹಾಕಬೇಕು ಅಂತಾ ನಾವು ಸ್ಪರ್ಧೆ ಮಾಡಬಾರದು. ಮಸೀದಿಯಲ್ಲಿ ಕೂಗುವುದರಿಂದ ವಿದ್ಯಾರ್ಥಿಗಳಿಗೆ, ವೃದ್ಧರಿಗೆ ತೊಂದರೆಯಾಗುತ್ತೆ ಅನ್ನೋದು ಬಹಳ ವರ್ಷಗಳಿಂದ ಕೇಳ್ತಿದ್ದೇವೆ ಎಂದರು. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?
ಮಸೀದಿ, ದೇವಸ್ಥಾನ, ಚರ್ಚ್‍ಗಳಲ್ಲಿ ಜೋರಾಗಿ ಮೈಕ್ ಹಾಕಲಾರಂಭಿಸಿದ್ರೆ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತೆ. ಈ ಕಾರಣದಿಂದ ಮುಸ್ಲಿಂ ಸಮುದಾಯದ ಮುಖಂಡರೇ ಈ ಬಗ್ಗೆ ಚಿಂತನೆ ಮಾಡಿ ನಿರ್ಧರಿಸಬೇಕು. ದೇವಸ್ಥಾನ, ಚರ್ಚ್‍ಗಳಲ್ಲಿರೋ ಹಾಗೆ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕ ಮಸೀದಿಯೊಳಗೆ ಮಾತ್ರ ಕೇಳುವಂತೆ ಮಾಡಿದ್ರೆ ಸೂಕ್ತ ಎಂದು ಸಲಹೆ ಕೊಟ್ಟರು.