ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಸಿದ್ದರಾಮಯ್ಯ ಓರ್ವ ಅಲೆಮಾರಿ ರಾಜಕಾರಣಿ. ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಭವಿಷ್ಯ ನುಡಿದರು.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಈ ಹಿಂದೆ ವರುಣ, ನಂತರ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಇದೀಗ ಕೋಲಾರ, ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ. ಅವರಿಗೆ ನಿಲ್ಲಲ್ಲು ಕ್ಷೇತ್ರ ಇಲ್ಲ. ಪರಿಸ್ಥಿತಿ ಈಗಿರುವಾಗ ಇನ್ನು 150 ಸ್ಥಾನ ಎಲ್ಲಿಂದ ಗೆಲ್ಲುವುದು. ಪಕ್ಷ ಅಧಿಕಾರಕ್ಕೆ ಬರುವುದಾದರು ಹೇಗೆ ಎಂದರು.
Advertisement
Advertisement
ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರನ್ನು ಸೋಲಿಸಿದರು. ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಿದರು. ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಲ್ಲ, ರಾಜ್ಯದ 224 ಕ್ಷೇತ್ರದಲ್ಲೂ ಅವರೊಬ್ಬರೇ ಸ್ಪರ್ಧಿಸಲಿ ನಮ್ಮ ಅಭ್ಯಂತರ ಇಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಆಡಳಿತ ಪಕ್ಷವೂ ಇಲ್ಲ, ವಿರೋಧ ಪಕ್ಷವೂ ಇಲ್ಲ: ಸಿಎಂ ಇಬ್ರಾಹಿಂ
Advertisement
ಈ ಹಿಂದೆ ಕಾಂಗ್ರೆಸ್ (Congress) ಪಕ್ಷದಿಂದ ಪಕ್ಷ ಬಿಟ್ಟು ಬೇರೆ ಬೇರೆ ಪಕ್ಷಕ್ಕೆ ಹೋಗಿರುವವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಪಕ್ಷಕ್ಕೆ ಆಹ್ವಾನಿಸಿರುವುದಕ್ಕೆ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಪಕ್ಷ ಬಿಟ್ಟು ಹೋದವರನ್ನು ಯಾವುದೇ ಕಾರಣಕ್ಕೂ ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷ ತೊರೆದು ಹೋದವರನ್ನು ಮತ್ತೆ ಪಕ್ಷಕ್ಕೆ ಆಹ್ವಾನಿಸಿರುವುದು ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ ಎಂಬುದಕ್ಕೆ ಸಾಕ್ಷಿ ಎಂದರು.
Advertisement
ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿ ಇದೀಗ ಮತ್ತೆ ಆಹ್ವಾನಿಸಿರುವುದು ಪಕ್ಷದ ಕಾರ್ಯಕರ್ತರಿಗೆ ಮಾಡಿದ ಅವಮಾನ. ಹೀಗಾಗಿ ಡಿಕೆಶಿ ಕಾರ್ಯಕರ್ತರ ಕ್ಷಮೆ ಕೇಳಬೇಕು. ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು 2 ಲಕ್ಷ ರೂ. ಹಣ ನೀಡಿ ಅರ್ಜಿ ಪಡೆಯಬೇಕಂತೆ. ನಿಷ್ಠಾವಂತ ಕಾಂಗ್ರೆಸ್ಸಿಗ 2 ಲಕ್ಷ ಹಣ ಎಲ್ಲಿಂದ ತರುತ್ತಾನೆ. ಬಡವರು ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದು ಕಾಂಗ್ರೆಸ್ ನೇರವಾಗಿ ಹೇಳಲಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೆಜಿಎಫ್ ಮ್ಯೂಸಿಕ್ ಬಳಕೆ – ಕಾಂಗ್ರೆಸ್ ಟ್ವಿಟ್ಟರ್ ಖಾತೆ ಬ್ಲಾಕ್ ಮಾಡುವಂತೆ ಕೋರ್ಟ್ ಆದೇಶ