ಶಿವಮೊಗ್ಗ: ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗ್ರತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
Advertisement
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ಶಿವಮೊಗ್ಗದಲ್ಲಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರದಂತೆ ಎಲ್ಲಾ ಮುಂಜಾಗರೂಕತೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಸ್ಸಾಂನಿಂದ ಬರುತ್ತಿದ್ದಾರೆ ನೂರಾರು ಕೂಲಿ ಕಾರ್ಮಿಕರು – ಸ್ಥಳೀಯರ ಆತಂಕ
Advertisement
Advertisement
9 ದಿನಗಳ ಕಾಲ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಹಿಂದೆ ವಿವಿಧ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
Advertisement
ವಿಜಯ ದಶಮಿಯ ಕಡೆ ದಿನದ ಮೆರವಣಿಗೆಯನ್ನು ಸರಳವಾಗಿ, ವ್ಯವಸ್ಥಿತವಾಗಿ ನಡೆಸಲಾಗುವುದು. ಪ್ರತಿ ವರ್ಷ ನೀಡುವಂತೆ 196 ದೇವಾಲಯಗಳಿಗೆ ಪೂಜೆ ಅಲಂಕಾರಕ್ಕಾಗಿ 4 ಸಾವಿರ ರೂ. ಅನುದಾನ ಒದಗಿಸಲಾಗುವುದು. ಆದರೆ ಮೆರವಣಿಗೆಯಲ್ಲಿ ಎಲ್ಲಾ ದೇವಾಲಯಗಳು ಭಾಗವಹಿಸುವ ಅಗತ್ಯವಿಲ್ಲ. ಆಯ್ದ ಕೆಲವು ದೇವಾಲಯಗಳಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್
ದಸರಾದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ಸಹಾಯಕವಾಗುವಂತೆ ನಗರದ ವಿವಿಧೆಡೆಗಳಲ್ಲಿ ಎಲ್‍ಇಡಿ ಪರದೆಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಈ ಪರದೆಗಳ ಮೂಲಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಸಹಕರಿಸುವ ಮೂಲಕ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.
ಈ ಸುದ್ದಿಗೋಷ್ಠಿಯಲ್ಲಿ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ ವಟಾರೆ, ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.