ದಾವಣಗೆರೆ: ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) 6 ದಿನಗಳ ಬಳಿಕ ಚನ್ನಗಿರಿಯ ನಿವಾಸಕ್ಕೆ ವಾಪಸ್ ಆಗಿದ್ದಾರೆ.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಇಂದು ರಿಲೀಫ್ ಸಿಕ್ಕಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ (High Court) ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿತ್ತು. ಇದನ್ನೂ ಓದಿ: ವಿಧಾನಸೌಧದ ಒಳಗೆ ಎಣ್ಣೆ ಬಾಟ್ಲಿ ತಂದ ಪೊಲೀಸ್ ಪೇದೆ- ಕೈ ಜಾರಿ ಬಿದ್ದು ಪೀಸ್, ಪೀಸ್
Advertisement
ಜಾಮೀನು ಸಿಕ್ಕಿದ ಬೆನ್ನಲ್ಲೇ ವಿರೂಪಾಕ್ಷಪ್ಪ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಅಭಿಮಾನಿಗಳು ಮಾಡಾಳ್ ಪರ ಜಯಘೋಷ ಹಾಕಿ ಸ್ವಾಗತಿಸಿದ್ದಾರೆ. ಅಷ್ಟೇ ಅಲ್ಲದೇ ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ.