ರಾಮನಗರ: ವರಮಹಾಲಕ್ಷ್ಮಿ ಹಬ್ಬಕ್ಕೆ ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆಗಳನ್ನು ಮಾರಾಟ ಮಾಡುವುದಕ್ಕೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ ಮಹೇಶ್ ರವರು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಶನ್ (ಕೆಎಸ್‍ಐಸಿ)ನ ಮೈಸೂರು ಸಿಲ್ಕ್ ಮಾರಾಟ ಮಳಿಗೆಯಲ್ಲೂ ಕೂಡಾ ಮಾರಾಟ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ಒಂದು ಸೀರೆಯನ್ನ ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ. ಇನ್ನು ರೇಷ್ಮೆ ಸೀರೆಗಳ ಪ್ರಾರಂಭಿಕ ಬೆಲೆಯೇ 14 ಸಾವಿರ ರೂಪಾಯಿಗಳಿದ್ದು, ಕೇವಲ 4,500 ರೂಪಾಯಿಗೆ ಮಾರಾಟ ಮಾಡುತ್ತಿದೆ.
Advertisement
ಕಡಿಮೆ ಬೆಲೆಗೆ ನೀಡುತ್ತಿರುವ ರೇಷ್ಮೆ ಸೀರೆ ಮಾತ್ರ ಸಾಕಷ್ಟು ಕಳಪೆಗುಣಮಟ್ಟದ್ದಾಗಿದೆ ಅಂತ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ. ಕೆಎಸ್‍ಐಸಿಯನ್ನ ಉಳಿಸುವ ನಿಟ್ಟಿನಲ್ಲಿ ಇದೀಗ ಕಾಣಿಸುತ್ತಿರುವ ಲೋಪದೋಷಗಳನ್ನ ಸರಿಪಡಿಸಿಕೊಂಡು ಸೀರೆಗಳ ಗುಣಮಟ್ಟ ಕಾಪಾಡಿಕೊಂಡು ಮಾರಾಟ ಮಾಡುವಂತೆ ಗ್ರಾಹಕರು ಮನವಿ ಮಾಡುತ್ತಿದ್ದಾರೆ.
Advertisement