ಬೆಂಗಳೂರು: ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ರಾಜಕುಮಾರ್ ರಸ್ತೆಯಲ್ಲಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಅಪಘಾತದಲ್ಲಿ (Accident) 39 ವರ್ಷದ ರಮೇಶ್ ಎಂಬ ವ್ಯಕ್ತಿ ಸಾವನ್ನಪ್ಪಿರೋ ಘಟನೆ ತಡರಾತ್ರಿ ನಡೆದಿದೆ. ಮಧ್ಯರಾತ್ರಿ 1:30 ರ ಸುಮಾರಿಗೆ ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್‌ಆರ್‌ಟಿಸಿ ಬಸ್ ರಾಜ್‌ಕುಮಾರ್ ರಸ್ತೆ ಮೂಲಕ ಮೆಜೆಸ್ಟಿಕ್‌ಗೆ ಹೋಗ್ತಿತ್ತು. ಈ ವೇಳೆ ಬೈಕ್‌ನಲ್ಲಿ ಹೋಗ್ತಿದ್ದ ರಮೇಶ್, ಬಸ್ ಓವರ್ ಟೇಕ್ ಮಾಡಿ ಬಲತಿರುವು ಪಡೆದುಕೊಳ್ಳೋಕೆ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೆಳಗೆ ಬಿದ್ದ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ
Advertisement
Advertisement
ಕುಡಿದು ಬೈಕ್ ಅಪಘಾತ ಮಾಡಿಕೊಂಡಿದ್ದು, ಘಟನೆ ನಂತರ ಮೃತನ ಸ್ನೇಹಿತರು ನಮಗೆ ಮನಬಂದಂತೆ ಥಳಿಸಿದ್ದಾರೆ ಅಂತಾ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಮೃತನ ಸ್ನೇಹಿತರ ವಿರುದ್ದ ಆರೋಪಿಸಿದ್ದಾರೆ. ಸುಮಾರು 15-20 ಜನ ಹಲ್ಲೆ ಮಾಡಿದ್ದಾರೆ ಅಂತಾ ಬಸ್ ಸಿಬ್ಬಂದಿ ಆರೋಪಿಸಿದ್ದಾರೆ. ಅಪಘಾತವಾಗಿದ್ದ ಬೈಕ್ ಬಳಿ ಮದ್ಯದ ಬಾಟಲಿಗಳು ಕೂಡ ಪತ್ತೆಯಾಗಿದ್ದು, ಬೈಕ್ ಸವಾರ ಕುಡಿದು ಗಾಡಿ ಓಡಿಸಿದ್ದ ಶಂಕೆ ವ್ಯಕ್ತವಾಗಿದೆ.
Advertisement
ಇನ್ನು ಈ ಬಗ್ಗೆ ಮೃತ ರಮೇಶ್ ಸ್ನೇಹಿತ ಬಸ್ ಚಾಲಕರ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ. ನಿರ್ಲಕ್ಷ್ಯ ಚಾಲನೆ ಮಾಡಿ ಕೆಎಸ್‌ಆರ್‌ಟಿಸಿ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಮಾಡಿದ್ದು, ಅದಕ್ಕೆ ನನ್ನ ಸ್ನೇಹಿತ ಬಲಿಯಾಗಿದ್ದಾನೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಭೀಕರ ರಸ್ತೆ ಅಫಘಾತ – ಐವರು ಕೂಲಿಕಾರ್ಮಿಕ ಮಹಿಳೆಯರು ಸಾವು
Advertisement
ಘಟನೆ ಸಂಬಂಧ ರಾಜಾಜಿನಗರ ಸಂಚಾರಿ ಮತ್ತು ಲಾ ಅಂಡ್ ಆರ್ಡರ್ ಎರಡೂ ಠಾಣೆಗಳಲ್ಲೂ ಪ್ರಕರಣ ದಾಖಲಾಗಿದೆ. ಅಪಘಾತ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ರೆ, ಬಸ್ ಡ್ರೈವರ್‌ಗಳ ಮೇಲೆ ಹಲ್ಲೆ ಮಾಡಿದ ಸಂಬಂಧ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಂತರ ಘಟನೆಗೆ ಕಾರಣವಾದ ಅಸಲಿ ಸತ್ಯ ಹೊರಬರಬೇಕಿದೆ.