– ನಾಳೆಯಿಂದ ಸೌಲಭ್ಯ ಜಾರಿ
ಬೆಂಗಳೂರು: ಸೇವಾಸಿಂಧು ಇ-ಪಾಸ್ ಹೊಂದಿರುವವರಿಗೆ ಅಂತರ-ರಾಜ್ಯ ಸಾರಿಗೆ ಸೌಲಭ್ಯವನ್ನು ಒದಗಿಸಲು ಕೆಎಸ್ಆರ್‌ಟಿಸಿ ಮುಂದಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ಕೇಂದ್ರ ಕಛೇರಿ: ಬೆಂಗಳೂರು.
ಪತ್ರಿಕಾ ಪ್ರಕಟಣೆ:
ಸೇವಾಸಿಂಧು ಇ-ಪಾಸ್ ಹೊಂದಿರುವವರಿಗೆ ಅಂತರ-ರಾಜ್ಯ ಸಾರಿಗೆ ಸೌಲಭ್ಯವನ್ನು ಒದಗಿಸಲು, ಕರಾರಸಾ ನಿಗಮವು ದಿನಾಂಕ 11-05-2020 ರಿಂದ ಜಾರಿಗೆ ಬರುವಂತೆ ಈ ಕೆಳಗಿನಂತೆ ಸಹಾಯವಾಣಿ ಸಂಖ್ಯೆಗಳನ್ನು ತೆರೆದಿರುತ್ತದೆ:
…1
— KSRTC (@KSRTC_Journeys) May 10, 2020
Advertisement
ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ ಸಹಾಯವಾಣಿ ಆರಂಭಿಸಿದೆ. ಇ-ಪಾಸ್ ಹೊಂದಿರುವವರಿಗೆ ಅಂತರ-ರಾಜ್ಯ ಸಾರಿಗೆ ಸೌಲಭ್ಯವನ್ನು ಒದಗಿಸಲು ಸಹಾಯವಾಣಿಯನ್ನು ದಿನಾಂಕ 11-05-2020 ರಿಂದ ಜಾರಿಗೆ ತರಲಿದೆ.
Advertisement
ಸಹಾಯವಾಣಿ ಸಂಖ್ಯೆ:
* ತಮಿಳುನಾಡು ರಾಜ್ಯ/ಪಾಂಡಿಚೇರಿ ಪ್ರಯಾಣಿಕರಿಗೆ ಸಹಾಯವಾಣಿ ಸಂಖ್ಯೆ: 7760990100, 7760990560, 7760990034, 7760990035, 7760991295.
Advertisement
* ಆಂಧ್ರಪ್ರದೇಶ/ತೆಲಂಗಾಣ ರಾಜ್ಯ ಪ್ರಯಾಣಿಕರಿಗೆ ಸಹಾಯವಾಣಿ ಸಂಖ್ಯೆ: 7760990561, 7760990532, 7760990955, 7760990530, 7760990967.
Advertisement
* ಕೇರಳ ರಾಜ್ಯ ಪ್ರಯಾಣಿಕರಿಗೆ ಸಹಾಯವಾಣಿ ಸಂಖ್ಯೆ: 7760990287, 7760990988, 7760990531, 6366423895, 6366423896.
•ಕೇರಳ ರಾಜ್ಯ: 7760990287, 7760990988, 7760990531, 6366423895, 6366423896.
ಆಸಕ್ತ ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಮೇಲಿನ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿರುತ್ತದೆ.
ಸಹಿ/
ಮುಖ್ಯ ಸಂಚಾರ ವ್ಯವಸ್ಥಾಪಕರು( ಕಾ).
— KSRTC (@KSRTC_Journeys) May 10, 2020
ಹೊರ ರಾಜ್ಯಗಳಿಂದ ಬಂದವರು ಕ್ವಾರಂಟೈನ್:
ಹೊರರಾಜ್ಯಗಳಿಂದ ಬೆಂಗಳೂರಿಗೆ ಸಾಕಷ್ಟು ಮಂದಿ ಬರುತ್ತಿರುವ ಹಿನ್ನೆಲೆ ಅವರಿಂದ ನಗರದಲ್ಲಿ ಕೊರೊನಾ ಸೋಂಕು ಹರಡಬಾರದು ಎಂದು ಎಚ್ಚರಿಕೆ ವಹಿಸಲಾಗಿದ್ದು, ಹೊರ ರಾಜ್ಯದಿಂದ ಸಿಲಿಕಾನ್ ಸಿಟಿಗೆ ಬರುವವರಿಗೆ ಕಡ್ಡಾಯವಾಗಿ ಕೈಗೆ ಸ್ಟಾಂಪಿಂಗ್ ಮಾಡಲಾಗುತ್ತದೆ. ಅವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಇರಲೇಬೇಕು ಎಂದು ಜಿಲ್ಲಾಡಳಿತ ತಿಳಿಸಿತ್ತು.
ಹೊರ ರಾಜ್ಯದವರಿಂದ ನಗರದಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅತ್ತಿಬೆಲೆ ಚೆಕ್‍ಪೋಸ್ಟ್ ನಲ್ಲಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಬೇರೆ ರಾಜ್ಯದಿಂದ ಬಂದವರ ಕೈಗೆ ಸ್ಟಾಂಪಿಂಗ್ ಹಾಕಿ, ಥರ್ಮಲ್ ಸ್ಕ್ಯಾನಿಂಗ್ ಮಾಡಿ, 14 ದಿನ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಸೂಚಿಸಲಾಗುತ್ತದೆ. ಬೈಕು, ಕಾರು ಯಾವುದೇ ಖಾಸಗಿ ವಾಹನದಲ್ಲೂ ಬಂದರೂ ಸೀಲ್ ಫಿಕ್ಸ್, ಕ್ವಾರಂಟೈನ್ ಕಡ್ಡಾಯ ಎಂದು ಬೆಂಗಳೂರು ಜಿಲ್ಲಾಡಳಿತ ಮಾಹಿತಿ ನೀಡಿತ್ತು.
ಷರತ್ತು ಪಾಲಿಸಿ:
ಲಾಕ್‍ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದಾಗಿದೆ. ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್‍ಸೈಟ್‍ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್‍ಲೋಡ್ ಮಾಡಬಹುದು.
ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ ವಾಹನ, ಬಾಡಿಗೆ ವಾಹನ ಅಥವಾ ಬಸ್ ಇವುಗಳ ಮೂಲಕ ಬರಬಹುದು. ವಾಹನದಲ್ಲಿ ಬರಬೇಕಾದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕುಳಿತುಕೊಳ್ಳಬೇಕು. ಒಂದು ಕಾರಿನಲ್ಲಿ ಗರಿಷ್ಟ 3 ಮಂದಿ, ಎಸ್‍ಯುವಿ ವಾಹನದಲ್ಲಿ 5, ವ್ಯಾನ್ ನಲ್ಲಿ 10 ಮಂದಿ, ಬಸ್ ನಲ್ಲಿ ಗರಿಷ್ಟ 25 ಮಂದಿ ಪ್ರಯಾಣಿಸಬಹುದು. ಯಾವ ಚೆಕ್ ಪೋಸ್ಟ್ ಮೂಲಕ ಅನುಮತಿ ನೀಡಲಾಗಿದೆಯೋ ಆ ಚೆಕ್ ಪೋಸ್ಟ್ ಮೂಲಕ ಮಾತ್ರ ಪ್ರವೇಶ ನೀಡಲಾಗುತ್ತದೆ.
ವೆಬ್‍ಸೈಟಿಗ್ ಭೇಟಿ ನೀಡಲು ಕ್ಲಿಕ್ ಮಾಡಿ: www.sevasindhu.karnataka.gov.in/